ಕಲಬುರಗಿ | ಪುಸ್ತಕ ಓದುವ ಸಂಸ್ಕೃತಿ ಬೆಳೆಸಿ : ಡಾ.ಮಾನಸ
ಕಲಬುರಗಿ : ಪ್ರತಿಯೊಬ್ಬರೂ ಪುಸ್ತಕ ಓದುವ ಸಂಸ್ಕೃತಿ ಬೆಳೆಸಬೇಕಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಹೇಳಿದರು.
ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಏರ್ಪಡಿಸಿದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಜಿಲ್ಲಾ ಜಾಗೃತ ಸಮಿತಿಗೆ ನೇಮಕಗೊಂಡ ಸದಸ್ಯರಿಗೆ ನೇಮಕಾತಿ ಅರ್ಹತಾ ಪತ್ರ ವಿತರಿಸಿ ಮಾತನಾಡಿದರು.ರು̤
ಪ್ರಾಧಿಕಾರದಿಂದ ಹೊಸ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಮನೆಗೊಂದು ಗ್ರಂಥಾಲಯ ಸ್ಥಾಪಿಸುವ ಮೂಲಕ ಓದುವ ಅಭಿರುಚಿ ಬೆಳೆಸುವ ಮೂಲಕ ಸುಸಂಸ್ಕೃತ ಸಮಾಜ ಕಟ್ಟುವುದಾಗಿದೆ. ಜಿಲ್ಲೆಯಲ್ಲಿ ಈ ಯೋಜನೆ ಪರಿಣಾಮಕಾರಿಯಾಗಿಸಲು ಪ್ರತಿ ಜಿಲ್ಲೆಯಲ್ಲಿ ಸದಸ್ಯರನ್ನು ಜಾಗೃತ ಸಮಿತಿಗೆ ನೇಮಿಸಲಾಗಿದೆ. ಈ ಸಮಿತಿ ಜತೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗ ತುಂಬಾ ಮುಖ್ಯವಾಗಿದೆ ಎಂದರು.
ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿದರು.
ಕೇಂದ್ರ ಕಸಾಪ ಪ್ರತಿನಿಧಿ ಸಯ್ಯದ್ ನಝಿರುದ್ದಿನ್ ಮುತ್ತವಲ್ಲಿ, ಪ್ರಾಧಿಕಾರದ ಶ್ರೀನಿವಾಸ ಕರಿಯಪ್ಪ, ಸಾಹಿತಿ ಸಿ.ಎಸ್.ಆನಂದ, ಹಿರಿಯ ಕವಿ ಎಂ.ಎನ್.ಸುಗಂಧಿ, ಶಾರದ ಗುಮ್ಮೇದಾರ್, ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ದರ್ಮರಾಜ ಜವಳಿ, ರಾಜೇಂದ್ರ ಮಾಡಬೂಳ, ಶಿವಾನಂದ ಸುರವಸೆ ಸೇರಿದಂತೆ ಅನೆಕರು ಹಾಜರಿದ್ದರು.
ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಯೋಜನೆಯ ಜಿಲ್ಲಾ ಜಾಗೃತ ಸಮಿತಿಗೆ ಶರಣಬಸಪ್ಪ ನರೂಣಿ, ಸುನೀತಾ ರೆಡ್ಡಿ, ಮಹಾನಂದಾ ಹುಲಿ, ರಾಜಶೇಖರ ಚೌದ್ರಿ ಅವರನ್ನು ನೇಮಕಾತಿ ಪತ್ರ ನೀಡಿ ಸತ್ಕರಿಸಿದರು.