×
Ad

ಕಲಬುರಗಿ | ಹೊಟೇಲ್‌ನಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ : ಓರ್ವ ಕಾರ್ಮಿಕನ ಸಾವು, ಹಲವರಿಗೆ ಗಾಯ

Update: 2024-06-21 22:42 IST

ಕಲಬುರಗಿ : ನಗರದ ಶ್ರೀಶರಣಬಸವೇಶ್ವರರ ಕೆರೆ ಬಳಿಯ ಸಪ್ತಗಿರಿ ಹೊಟೇಲ್‌ನಲ್ಲಿ ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡ ಪ್ರಕರಣ ಸಂಬಂಧ ಚಿಕಿತ್ಸೆ ಫಲಕಾರಿಯಾಗದೆ ಓರ್ವ ಕಾರ್ಮಿಕ ಮೃತಪಟ್ಟಿರುವ ಘಟನೆ ಶುಕ್ರವಾರ ಬ್ರಹ್ಮಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರೋಜಾ (ಬಿ) ಬಡಾವಣೆಯ ನಿವಾಸಿ ಮಲ್ಲಿಕಾರ್ಜುನ ಎಂಬುವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಘಟನೆಯಲ್ಲಿ 10 ಜನರಿಗೆ ಗಾಯಗಳಾಗಿದ್ದು, ಗಂಭೀರ ಗಾಯಗೊಂಡ ನಾಲ್ವರನ್ನು ಬೆಂಗಳೂರು ಮತ್ತು ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಶಾಸಕರಿಂದ ಸಾಂತ್ವನ:

ಹೋಟಲ್‌ ಸಿಲಿಂಡರ್‌ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿರುವ ಮಲ್ಲಿಕಾರ್ಜುನ ಕುಟುಂಬದವರಿಗೆ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಎಲ್ಲಾ ಕಾರ್ಮಿಕರಿಗೆ ಸಿಎಂ ಪರಿಹಾರ ನಿಧಿಯಿಂದ ಪರಿಹಾರ ಒದಗಿಸುವ ದಿಶೆಯಲ್ಲಿ ಪ್ರಯತ್ನಿಸೋದಾಗಿಯೂ ದೂರವಾಣಿ ಕರೆ ಮೂಲಕ ಭರವಸೆ ನೀಡಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News