×
Ad

ಕಲಬುರಗಿ: ಸಿಲಿಂಡರ್ ಸ್ಫೋಟ; ಚಿನ್ನಾಭರಣ, ನಗದು ಭಸ್ಮ

Update: 2025-10-22 15:04 IST

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಸೇರಿದಂತೆ ಅಗತ್ಯ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಚಿಂಚೋಳಿ ತಾಲೂಕಿನ ಮೋತಕಪಲ್ಲಿ ಗ್ರಾಮದಲ್ಲಿ ನಡೆದಿದೆ.

ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ಸಿಲಿಂಡರ್ ಸೋರಿಕೆಯ ವಾಸನೆ ಬಂದಿದೆ, ತೀವ್ರ ವಾಸನೆ ಬರುತ್ತಲೇ ಕುಟುಂಬದ ನಾಲ್ವರು ಸದಸ್ಯರು ಮನೆಯಿಂದ ಹೊರಬಂದ ತಕ್ಷಣವೇ ಸಿಲಿಂಡರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಮನೆಯಲ್ಲಿನ ಚಿನ್ನಾಭರಣ, ನಗದು, ಮನೆಗೆ ಬೇಕಾಗುವತಹ ಅಗತ್ಯ ವಸ್ತುಗಳು ಸುಟ್ಟು ಭಸ್ಮವಾಗಿವೆ. ಕೂಡಲೇ ಸರ್ಕಾರದಿಂದ ಪರಿಹಾರ ನೀಡಬೇಕೆಂದು ಕುಟುಂಬಸ್ಥರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ತಗುಲಿದ ಮನೆಗೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಸುಲೇಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News