ಕಲಬುರಗಿ | ವಸತಿ ನಿಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ
Update: 2024-03-09 14:10 IST
ಕಲಬುರಗಿ: 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆಯುವ ಮುನ್ನವೇ ಸಂಶಯಾಸ್ಪದವಾಗಿ ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ನಿಲಯದಲ್ಲಿ ಶುಕ್ರವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಚಿತ್ತಾಪುರ ತಾಲೂಕಿನ ಕಡಬೂರ ಗ್ರಾಮದ ನಿವಾಸಿಯಾಗಿರುವ 16 ವರ್ಷದ ವಿದ್ಯಾರ್ಥಿನಿ ಮೃತಪಟ್ಟಿದ್ದು, ತಾನು ಮಲಗುತ್ತಿದ್ದ ವಸತಿ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಹೇಳಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಚಿತ್ತಾಪುರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.