×
Ad

ಕಲಬುರಗಿ: ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಧರಣಿ

Update: 2025-02-25 15:39 IST

ಕಲಬುರಗಿ : ಗುರುಮಠಕಲ್ ತಾಲೂಕಿನ ಇಂದಿರಾನಗರದ ಅಲೆಮಾರಿ ಬುಡ್ಗಜಂಗಮ ಸಮುದಾಯದ 19 ವರ್ಷದ ಯುವತಿ ಹಾಗೂ 15 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಮೃತ ದೇಹಗಳನ್ನು ಕೆರೆಯಲ್ಲಿ ಎಸೆದಿರುವ ಎನ್ನಲಾದ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿ.ವೈ.ಎಫ್.ಐ) ಸಂಘಟನೆ ವತಿಯಿಂದ ಪ್ರತಿಭಟಿಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಇಬ್ಬರ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿ ಕೆರೆಯಲ್ಲಿ ಎಸೆದು ಹೋಗಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ ಈ ಪ್ರಕರಣವನ್ನು ಪೊಲೀಸ್ ಇಲಾಖೆ ಪರಿಗಣಿಸದಿರುವುದು ಖಂಡನಾರ್ಹ ಎಂದು ಡಿ.ವೈ.ಎಫ್.ಐ ಪದಾಧಿಕಾರಿಗಳು ಖಂಡಿಸಿದ್ದಾರೆ.

ಅಲೆಮಾರಿ ಸಮುದಾಯದವರಿಗೆ ಉಚಿತವಾಗಿ ವಸತಿ, ಶಿಕ್ಷಣ ಹಾಗೂ ಉದ್ಯೋಗದ ಭದ್ರತೆ ದೊರಕಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷೆ ಲವಿತ್ರ ವಸ್ತ್ರದ್, ಸಲ್ಮಾನ್ ಖಾನ್, ದಿಲ್ ಶಾದ್, ಅಶ್ವಿನಿ ಮಾವಿನಕರ್, ಸುಜಾತಾ ವೈ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News