×
Ad

ಕಲಬುರಗಿ | ಅಂಬಿಗರ ಚೌಡಯ್ಯ ಪುತ್ಥಳಿ ಸ್ಥಾಪನೆಗೆ ಆಗ್ರಹ

Update: 2025-01-17 21:33 IST

ಕಲಬುರಗಿ : ಮುಂಬರುವ 902ನೇ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಮಾಡಲು ನಗರದ ಇಂದಿರಾ ಭವನ ಪಕ್ಕದಲ್ಲಿ ಅಂಬಿಗರ ಚೌಡಯ್ಯ ಪುತ್ಥಳಿ ನಿರ್ಮಾಣ ಮಾಡಬೇಕೆಂದು ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಚೀನ್ ಫರಹತಾಬಾದ್‌ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಮಾಡುವಂತೆ ಈಗಾಗಲೇ ಸರಕಾರ ಆದೇಶ ಮಾಡಿರುತ್ತದೆ. ಆದರೆ ಕಲಬುರಗಿ ನಗರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಪುತ್ಥಳಿ ಇಲ್ಲ. ಸದರಿ ಪುತ್ಥಳಿ ಇಲ್ಲದೇ ಇರುವುದರಿಂದ ಗಣ್ಯವ್ಯಕ್ತಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಮಾಲಾರ್ಪಣೆ ಮಾಡಲು ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಎಲ್ಲಾ ಸಮುದಾಯದ ಪುತ್ಥಳಿ ನಿರ್ಮಾಣ ಆಗಿದ್ದು, ಆದೇ ಅಂಬಿಗರ ಚೌಡಯ್ಯ ಪುತ್ಥಳಿ ನಿರ್ಮಾಣ ಮಾಡಿ ಕಬ್ಬಲಿಗ ಸಮುದಾಯದವರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸತೀಶ ಫರಹತಾಬಾದ, ಸುರೇಶ ಹನಗುಡಿ, ಅಕ್ಷಯ, ಗುಡ್ಡು ಸಿಂಗ್, ಚಿಂಟು ಜಮಾದಾರ, ಅಂಕುಶ, ವಿಕಾಸ, ಅಣವೀರ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News