×
Ad

ಕಲಬುರಗಿ | ಪರಿಶಿಷ್ಟ ಜಾತಿಗಳ ಪೂರ್ಣಪ್ರಮಾಣದ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹ

Update: 2025-12-16 10:29 IST

ಕಲಬುರಗಿ: ಪರಿಶಿಷ್ಟ ಜಾತಿಗಳ ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿಗೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಾ. ಬಾಬು ಜಗಜೀವನ್ ರಾಮ್ ಅಭಿವೃದ್ದಿ ಮತ್ತು ಹೋರಾಟ ಸಮಿತಿ ಕಲಬುರಗಿ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಉಚ್ಚ ನ್ಯಾಯಾಲಯ ತೀರ್ಪು ನೀಡಿ ಇಂದಿಗೆ 14 ತಿಂಗಳು ಗತಿಸಿಹೋಗಿವೆ. ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳು ಒಳ ಮೀಸಲಾತಿಯನ್ನು ಜಾರಿ ಮಾಡಿವೆ. ಆದರೆ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಈವರೆಗೆ ಒಳ ಮೀಸಲಾತಿಯ ಸಂಪೂರ್ಣ ಜಾರಿಗೆ ಮಾಡುವಲ್ಲಿ ಮೀನಾ ಮೇಷ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಡಾ. ಬಾಬು ಜಗಜೀವನ್ ರಾಮ್ ರವರ ಜನ್ಮ ದಿನಾಚರಣೆ ಅಂಗವಾಗಿ ಎ.5ರಂದು ಸರ್ಕಾರ ರಜೆ ಘೋಷಿಸಬೇಕು, ಕಲಬುರಗಿ ನಗರದಲ್ಲಿರುವ ಬಾಬು ಜಗಜೀವನ್ ರಾಮ್ ಭವನ ಕಟ್ಟಡ ಪೂರ್ಣಗೊಳಿಸಲು ಹೆಚ್ಚಿನ ಅನುದಾನ ಕೊಡಬೇಕು, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕು, ಅಲ್ಲದೆ ಮಾದರ ಚೆನ್ನಯ್ಯ ಅವರ ಜನ್ಮದಿನಾಚರಣೆಯನ್ನು ಸರ್ಕಾರದಿಂದಲೇ ಆಚರಿಸುವಂತೆ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿದರು.

ಸರ್ಕಾರದ ವಿವಿಧ ಯೋಜನೆಗಳನ್ನು ನಮ್ಮ ಸಮುದಾಯಕ್ಕೆ ನೀಡುವಲ್ಲಿ ತಾರತಮ್ಯ ಮಾಡುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿಯವರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಮುದಾಯದ ಮುಖಂಡ ದಶರಥ ಕಲಗುರ್ತಿ, ರಾಜು ಕಟ್ಟಿಮನಿ, ರಮೇಶ್ ವಾಡೆಕರ್, ಮಲ್ಲಿಕಾರ್ಜುನ್ ಜಿನಕೇರಿ, ಚಂದ್ರಕಾಂತ್ ನಾಟಿಕರ್, ಶರಣು ಸಗರ್ ಕರ್, ಬಂಡೇಶ್ ರತ್ನಟಗಿ ಸೇರಿದಂತೆ ಹಲವರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News