×
Ad

ಕಲಬುರಗಿ | ಸಿಮೆಂಟ್ ಕಾರ್ಖಾನೆಯಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಲು ಆಗ್ರಹ

Update: 2025-05-09 19:25 IST

ಕಲಬುರಗಿ : ಸೇಡಂ ತಾಲ್ಲೂಕು ವ್ಯಾಪ್ತಿಯ ಮಳಖೇಡ ನ ರಾಜಶ್ರೀ ಸಿಮೆಂಟ್ ಕಾರ್ಖಾನೆ ಆಡಳಿತ ಮಂಡಳಿಯಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಸಹಾಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು.

ಆಡಳಿತ ಮಂಡಳಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡದ ಕಾರಣಕ್ಕೆ ಬೇರೆ ರಾಜ್ಯಗಳಿಗೆ ವಲಸೆ ಹೋಗಿ ತಮ್ಮ ಉಪ ಜೀವನ ನಡೆಸುವಂತ ಪರಿಸ್ಥಿತಿ ಎದುರಾಗಿದೆ. ಸ್ಥಳೀಯರಿಗೆ ಉದ್ಯೋಗ ನೀಡಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಾರ್ಖಾನೆ ವಿರುದ್ಧ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿ, ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಮೌನೇಶ್ ಬೇನಕನಹಳ್ಳಿ, ವಸಂತ, ರಾಜಕುಮಾರ ಘಂಟಿ ತರನಳ್ಳಿ, ದೇವು, ಮಹೇಶ್ ಉಡಗಿ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News