ಕಲಬುರಗಿ : ಸರ್ಕಾರಿ ಆಸ್ಪತ್ರೆಗಳಲ್ಲಿ ಹಲವು ವರ್ಷಗಳಿಂದ ಒಳಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿಯನ್ನು ಕಾಯಂಗೊಳಿಸಿ, ವೇತನ ಹೆಚ್ಚಿಸಬೇಕೆಂದು ಆಗ್ರಹಿಸಿ ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸಚಿನ್ ಪರಹತಾಬಾದ್ ನೇತೃತ್ವದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಆರೋಗ್ಯ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಸಿಬ್ಬಂದಿಗೆ ಉದ್ಯೋಗ ಭದ್ರತೆ ಹಾಗೂ ಸಮರ್ಪಕ ವೇತನ ದೊರೆಯುತ್ತಿಲ್ಲ. ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯ ಕೆಲಸವನ್ನು ಸರ್ಕಾರ ಪರಿಗಣಿಸಿ, ಅವರನ್ನು ಕಾಯಂಗೊಳಿಸುವುದರ ಜೊತೆಗೆ ವೇತನ ಹೆಚ್ಚಳಕ್ಕೂ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor