×
Ad

ಕಲಬುರಗಿ | ಚೌಡಯ್ಯನವರ ಮೂರ್ತಿ ಭಗ್ನ : ಎಂಎಲ್‍ಸಿ ಡಾ.ತಳವಾರ ಸಾಬಣ್ಣ ಖಂಡನೆ

Update: 2025-10-10 21:32 IST

ಕಲಬುರಗಿ : ಶಹಾಬಾದ್‌ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿ ಇದೇ ವರ್ಷ ಸ್ಥಾಪನೆಯಾಗಿ ಉದ್ಘಾಟನೆಯಾಗಿದ್ದು, ಕೆಲವು ಸಮಾಜ ಘಾತಕ ವ್ಯಕ್ತಿಗಳು ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ನಿನ್ನೆ ರಾತ್ರಿ ಭಗ್ನಗೊಳಿಸಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯರಾದ ಡಾ.ತಳವಾರ ಸಾಬಣ್ಣ ತಿಳಿಸಿದ್ದಾರೆ.

ಮಹಾಪುರುಷರು ಯಾವುದೇ ಒಂದು ಸಮಾಜಕ್ಕೆ ಸೀಮಿತವಾಗಿರುವುದಿಲ್ಲ, ಮಹಾಪುರುಷರನ್ನು ಎಲ್ಲಾ ಸಮಾಜದವರು ಗೌರವಿಸುತ್ತಾರೆ, ಮುತ್ತಗಾ ಗ್ರಾಮದ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಿಸಿರುವುದು ಭಾವನತ್ಮಕವಾಗಿ ಕೋಲಿ-ಕಬ್ಬಲಿಗ ಸಮಾಜಕ್ಕೆ ನೇರವಾಗಿ ದಾಳಿ ಮಾಡಿದಂತಾಗಿದೆ, ಈ ಅನ್ಯಾಯವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಿಸಿರುವ ಸಮಾಜ ಘಾತಕ ವ್ಯಕ್ತಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಹಾಗೂ ಜಿಲ್ಲಾಡಳಿತದ ವತಿಯಿಂದ ಮುತ್ತಗಾ ಗ್ರಾಮದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಪುನರ್‌ ನಿರ್ಮಾಣ ಮಾಡಿಕೊಡಬೇಕೆಂದು ವಿಧಾನ ಪರಿಷತ್ ಸದಸ್ಯರಾದ ಡಾ.ತಳವಾರ ಸಾಬಣ್ಣ ಅವರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News