Kalaburagi | ಜಿಲ್ಲೆಯಲ್ಲಿ 18.23 ಲಕ್ಷ ಮತದಾರರ ಗಣತಿ ನಮೂನೆ ಡಿಜಿಟಲೀಕರಣ : ಡಿಸಿ ಇಕ್ರಮ್ ಶರೀಫ್

Update: 2026-08-01 22:30 IST

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯದ ಅಂಗವಾಗಿ ಜಿಲ್ಲೆಯಾದ್ಯಂತ ಶನಿವಾರದ ಅಂತ್ಯಕ್ಕೆ ಒಟ್ಟು 23,71,542 ಮತದಾರರ ಪೈಕಿ 18,23,335 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.

ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ಭೇಟಿ ನೀಡಿ ನಡೆಸಿದ ಪರಿಶೀಲನೆಯಲ್ಲಿ ಇದುವರೆಗೆ 70,938 ಮತದಾರರು ನಿಧನ ಹೊಂದಿರುವುದು, 44,652 ಮಂದಿ ಮನೆಯಲ್ಲಿ ಗೈರಾಗಿರುವುದು, 3,34,458 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು, 15,674 ಪ್ರಕರಣಗಳು ಇತರೆ ಕಾರಣಗಳಿಗೆ ಸಂಬಂಧಿಸಿದ್ದು ಹಾಗೂ 31,502 ಮಂದಿ ಈಗಾಗಲೇ ಬೇರೆಡೆ ಮತದಾರರಾಗಿ ನೋಂದಾಯಿಸಿಕೊಂಡಿರುವುದು ವರದಿಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News