×
Ad

Kalaburagi | ಗುತ್ತಿಗೆ ಆಧಾರಿತ ನೇಮಕಗೊಂಡ ವೈದ್ಯರಿಗೆ ನೇಮಕಾತಿ ಪತ್ರ ವಿತರಣೆ

Update: 2026-06-24 22:22 IST

ಕಲಬುರಗಿ: ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ 18 ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಬುಧವಾರ ನೇಮಕಾತಿ ಪತ್ರ ವಿತರಿಸಿದರು.

ಜಿಲ್ಲೆಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ 16 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನಡೆಸಿದ ವಾಕ್-ಇನ್-ಇಂಟರ್ವ್ಯೂನಲ್ಲಿ ಭಾಗವಹಿಸಿದ ಅಭ್ಯರ್ಥಿಗಳ ಪೈಕಿ 13 ಮಂದಿ ಆಯ್ಕೆಯಾಗಿದ್ದು, ಅವರಿಗೆ ನೇಮಕಾತಿ ಆದೇಶ ನೀಡಲಾಯಿತು.

ಅದೇ ರೀತಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿನ 6 ತುರ್ತು ಚಿಕಿತ್ಸಾ ಮತ್ತು ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳ ಪೈಕಿ 5 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಅವರಿಗೂ ನೇಮಕಾತಿ ಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ ಹಾಗೂ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಸಿದ್ರಾಮ ಪಾಟೀಲ ಉಪಸ್ಥಿತರಿದ್ದರು.

ಇನ್ನೂ 4 ಹುದ್ದೆಗಳು ಖಾಲಿ:

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 2 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹಾಗೂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ/ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 2 ವೈದ್ಯಾಧಿಕಾರಿಗಳ ಹುದ್ದೆಗಳು ಇನ್ನೂ ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಗುತ್ತಿಗೆ ಆಧಾರದ ನೇಮಕಾತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News