×
Ad

ಕಲಬುರಗಿ | ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ವಿತರಣೆ

Update: 2025-05-21 21:34 IST

ಕಲಬುರಗಿ : ಕಲಬುರಗಿ-ಬೀದರ್ ಹಾಗೂ ಯಾದಗಿರಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಹಾಗೂ ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಕೆಎಂಎಫ್ ಹತ್ತಿರದ ಸಳಾಸರ್ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಿದ್ದ ಆಳಂದ ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರಿಗೆ ಯಶಸ್ವಿನಿ ಕಾರ್ಡುಗಳ ವಿತರಣೆ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಕರ್ನಾಟಕ ರಾಜ್ಯ ನೀತಿ ಹಾಗೂ ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಆಳಂದ ಶಾಸಕ ಬಿ.ಆರ್.ಪಾಟೀಲ್‌ ಉದ್ಘಾಟಿಸಿದರು.

ಕಲಬುರಗಿ, ಬೀದರ್ ಯಾದಗಿರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಸೋಮಶೇಖರ್ ಗೋನಾಯಕ್, ನಿರ್ದೇಶಕ ಅಶೋಕ ಸಾವಳೇಶ್ವರ, ಕೆಎಂಎಫ್ ನಿರ್ದೇಶಕರಾದ ಈರಣ್ಣ ಝಳಕಿ, ಬಸವರಾಜ ಉಪ್ಪಿನ್, ಮಲ್ಲಿಕಾರ್ಜುನ ಪಾಟೀಲ, ಸಹಕಾರ ಸಂಘಗಳ ಉಪ ನಿಬಂಧಕ ಕಿಶೋರಕುಮಾರ, ಒಕ್ಕೂಟದ ನಿರ್ದೇಶಕ ಪಿ.ವಿ.ಪಾಟೀಲ, ಕೆ ಮತ್ತು ವೈ ಡಿಸಿಸಿ ಬ್ಯಾಂಕ್ ಮು.ಕಾ.ನಿ.ಪವನಕುಮಾರ ರಾಠೋಡ್, ಸಹಕಾರ ಸಂಘಗಳ ಉಪ ನಿಬಂಧಕ ಸಂಜಯಕುಮಾರ, ಮಲ್ಲಿಕಾರ್ಜುನ, ಶಂಕ್ರಪ್ಪಪಾಟೀಲ, ಡಾ.ವಿಶ್ವನಾಥ ರೆಡ್ಡಿ ಸೇರಿದಂತೆ ಮತ್ತಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News