ಕಲಬುರಗಿ| 'ಸಖಿ ಸೆಂಟರ್' ನ ನೂತನ ವಾಹನಗಳಿಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಚಾಲನೆ
ಕಲಬುರಗಿ : ಕೇಂದ್ರ ಸರ್ಕಾರದ “ಮಿಷನ್ ಶಕ್ತಿ” ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಪ್ ಸೆಂಟರ್‌ಗೆ ನೋಂದ ಮಹಿಳೆಯರಿಗೆ ಸಹಾಯ ಒದಗಿಸಲು ಬಾಡಿಗೆ ಆಧಾರದಲ್ಲಿ ಪಡೆಯಲಾದ ಎರಡು ವಾಹನಗಳಿಗೆ ಗುರುವಾರ ಕಲಬುರಗಿ ನಗರದ ಪ್ರಗತಿ ಕಾಲೋನಿಯಲ್ಲಿರುವ ಸಖಿ ಸೆಂಟರ್ ಆವರಣದಲ್ಲಿ ಉಪ ಆಯುಕ್ತೆ ಬಿ.ಫೌಝಿಯಾ ತರನ್ನುಮ್ ಚಾಲನೆ ನೀಡಿದರು.
ಒನ್ ಸ್ಟಾಪ್ ಸೆಂಟರ್‌ನಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಆಪ್ತ ಸಮಾಲೋಚನೆ, ವೈದ್ಯಕೀಯ ಚಿಕಿತ್ಸೆ, ಕಾನೂನು ನೆರವು, ಪೊಲೀಸ್ ಸಹಾಯ ಹಾಗೂ ತಾತ್ಕಾಲಿಕ ವಸತಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ನೂತನ ವಾಹನಗಳ ನೆರವಿನಿಂದ ನೋಂದ ಮಹಿಳೆಯರಿಗೆ ಹಾಗೂ ಸಂಕಷ್ಟದಲ್ಲಿರುವ ದೌರ್ಜನ್ಯಪೀಡಿತರಿಗೆ ತ್ವರಿತ ನೆರವು ತಲುಪಿಸುವ ಜೊತೆಗೆ, ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಬೇಕೆಂದು ಡಿ.ಸಿ. ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಪೋಷಣ ಅಭಿಯಾನ್ ಯೋಜನೆಯಡಿ ಸಖಿ ಕೇಂದ್ರಕ್ಕೆ ಸ್ಮಾರ್ಟ್ ಮೊಬೈಲ್ ಸಹ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಡಿ.ಎಚ್.ಓ ಡಾ. ಶರಣಬಸಪ್ಪ ಕ್ಯಾತನಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಿವಶರಣಪ್ಪ, ಜಿಲ್ಲಾ ನಿರೂಪಣಾಧಿಕಾರಿ ಮುರುಗೇಶ ಗುಣಾರಿ, ಡಿ.ಸಿ.ಪಿ.ಓ ಮಂಜುಳಾ ಪಾಟೀಲ್, ವಿಜಯಲಕ್ಷ್ಮೀ ಜಾಧವ್, ಗೀತಾ ಪಾಟೀಲ್ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.