Kalaburagi | ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಭೇಟಿ
Update: 2026-05-20 23:03 IST
ಕಲಬುರಗಿ: ಜಿಲ್ಲೆಯ ಕ್ರೀಡಾ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಬುಧವಾರ ಭೇಟಿ ನೀಡಿ ಕ್ರೀಡಾ ಅಂಕಣಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ವಿವಿಧ ಸೌಲಭ್ಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಕ್ರೀಡಾಪಟುಗಳಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶೀಲನಾ ವೇಳೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂಗಮೇಶ, ಲೋಕೋಪಯೋಗಿ ಇಲಾಖೆಯ ರಾಹುಲ್ ಕಾಂಬಳೆ, ಕೆಆರ್‌ಐಡಿಎಲ್‌ನ ಅಭಿಷೇಕ್ ಪೋಲ್ ಸೇರಿದಂತೆ ಕ್ರೀಡಾ ಇಲಾಖೆಯ ತರಬೇತುದಾರರಾದ ಸಂಜಯ್ ಬಾಣದ, ರಾಜು ಚೌಹಾಣ್, ಪ್ರವೀಣ್ ಪುಣೆ, ಅಶೋಕ್ ಎಂ. ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.