ಕಲಬುರಗಿ | ಜಿಲ್ಲಾಧಿಕಾರಿಗಳಿಂದ “ಯುವನಿಧಿ ಯೋಜನೆಯ ನೋಂದಣಿ ಅಭಿಯಾನ”ಕ್ಕೆ ಚಾಲನೆ
ಕಲಬುರಗಿ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಡಿ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳುವ ಅಭಿಯಾನಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚಾಲನೆ ನೀಡಿದರು.
ಈ ಯೋಜನೆಯಡಿ 2023-24 ಮತ್ತು 2024-25ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಪಾಸಾದ ನಿರುದ್ಯೋಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪದವೀಧರರಿಗೆ ಪ್ರತಿ ತಿಂಗಳು 3,000 ರೂ. ಹಾಗೂ ಡಿಪ್ಲೋಮಾದಾರರಿಗೆ 1,500 ರೂ.ಗಳ ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ನೇರವಾಗಿ ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ದಲ್ಲಿ ನೋಂದಾಯಿಸಿಕೊಳ್ಳಲು ಅಥವಾ ತಮ್ಮ ಸಮೀಪದ ಕರ್ನಾಟಕ ಓನ್/ ಗ್ರಾಮ ಓನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಹ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದೂರವಾಣಿ ಸಂಖ್ಯೆ 08472-274846 ಗೆ ಅಥವಾ ಈ ಕಚೇರಿಗೆ ಖುದ್ದಾಗಿ ಸಂಪರ್ಕಿಸಬೇಕು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಕೌಶಾಲಾಭಿವೃದ್ಧಿ ಅಧಿಕಾರಿ ನಾಗೂಬಾಯಿ ದೊಡ್ಡಮನಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಪ್ರಥಮ ದರ್ಜೆ ಸಹಾಯಕ ಶರಣಪ್ಪ ಹಾಗೂ ಪಿಯೂಷ ಪರಿಹಾರ ಮಾದರಿ ವೃತ್ತಿ ಕೇಂದ್ರದ ಸತೀಶ ಕುಮಾರ ರಾಠೋಡ ಅವರು ಉಪಸ್ಥಿತರಿದರು.