×
Ad

ಕಲಬುರಗಿ | ಜಿಲ್ಲಾಧಿಕಾರಿಗಳಿಂದ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

Update: 2026-01-01 16:31 IST

ಕಲಬುರಗಿ: ರಾಜ್ಯ ಸರಕಾರಿ ನೌಕರರ ಸಂಘ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಸೃಜಿಸಲಾದ 2026ರ ವಾರ್ಷಿಕ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಬಿಡುಗಡೆಗೊಳಿಸಿದರು.

ಇದೇ ವೇಳೆಯಲ್ಲಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರಿಗೆ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು ಕೊರಲಾಯಿತು.

ಜಿಲ್ಲಾ ಅಧ್ಯಕ್ಷರಾದ ಬಸವರಾಜ ಬಳುಂಡಗಿ ಅವರ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಿಗೆ ವಾರ್ಷಿಕ ಕ್ಯಾಲೆಂಡರ್ ವಿತರಣೆ ಮಾಡಲಾಯಿತು.

ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಹೂಗಾರ, ರಾಜ್ಯ ಪರಿಷತ್ ಸದಸ್ಯರಾದ ಧರ್ಮರಾಯ ಜವಳಿ, ಹಿರಿಯ ಉಪಾಧ್ಯಕ್ಷರಾದ ಎಂ.ಬಿ.ಪಾಟೀಲ, ಸುರೇಶ ವಗ್ಗೆ, ಕಾರ್ಯಾಧ್ಯಕ್ಷರಾದ ಚಂದ್ರಕಾಂತ ಏರಿ, ಸಿದ್ದಲಿಂಗಯ್ಯ ಸ್ವಾಮಿ, ರಾಜೇಶ ನೀಲಳ್ಳಿ, ವೀರಭದ್ರಯ್ಯ ಸ್ವಾಮಿ, ಶಶಿಕಾಂತ ಹೊಳಕರ, ಜಮೀಲ್ ಇಮ್ರಾನ್, ರೇವಣಸಿದ್ದಪ್ಪ, ಗುರುಶರಣ, ಮಲ್ಲಿಕಾರ್ಜುನ, ಪದ್ಮರಾಜ , ಅನೀಲ ಕುಮಸಿ, ಯಾದವ್, ಸವಿತಾ ನಾಸಿ, ಅಣವೀರಪ್ಪ ಯಾಕಾಪೂರ, ಶರಣರಾಜ ಛಪ್ಪರಬಂಧಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News