×
Ad

ಕಲಬುರಗಿ | ಡಾ.ಬಾಬು ಜಗಜೀವನರಾಂ, ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Update: 2025-03-04 21:02 IST

ಕಲಬುರಗಿ : ಏ.5 ರಂದು ಡಾ.ಬಾಬು ಜಗಜೀವನರಾಂ ಹಾಗೂ ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಇವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಪ.ಜಾತಿ / ಪ.ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2025-26ನೇ ಸಾಲಿನ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದ್ದು, ಇದಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ತಿಳಿಸಿದ್ದಾರೆ.

ಈ ಪ್ರಶಸ್ತಿಗಳಿಗಾಗಿ ಅರ್ಹ ಫಲಾನುಭವಿಗಳು ನಿಗದಿತ ನಮೂನೆಯನ್ನು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ 2025ರ ಮಾ.10 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನ ಸೌಧ ಎದರುಗಡೆಯಿರುವ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278621, ಮೊಬೈಲ್ ಸಂಖ್ಯೆ 9844295134 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News