×
Ad

ಕಲಬುರಗಿ | ಜಿಲ್ಲಾ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರಾಗಿ ಡಾ.ಪರಮೇಶ್ವರ್‌ ಅಧಿಕಾರ ಸ್ವೀಕಾರ

Update: 2025-02-27 22:46 IST

ಕಲಬುರಗಿ : ಸಾರ್ವಜನಿಕ‌ ಗ್ರಂಥಾಲಯ ಇಲಾಖೆಯ ಕಲಬುರಗಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರಾಗಿ ಡಾ.ಪರಮೇಶ್ವರ್‌ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

ಇಲಾಖೆಯ ಬೆಂಗಳೂರಿನ ಆಯುಕ್ತರ ಕಚೇರಿಯಲ್ಲಿ ಮುಖ್ಯ ಗ್ರಂಥಾಲಯಾಧಿಕಾರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ.ಪರಮೇಶ್ವರ್‌ ಅವರನ್ನು ಸರ್ಕಾರ ಇತ್ತೀಚೆಗೆ ಉಪನಿರ್ದೇಶಕರ ಹುದ್ದೆಗೆ ಪದೋನ್ನತಿ ನೀಡಿ ಕಲಬುರಗಿ ಕಚೇರಿಗೆ ವರ್ಗಾಯಿಸಿ ಆದೇಶ ಹೊರಡಿಸಿತ್ತು.

ಹೆಚ್ಚುವರಿ ಪ್ರಭಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶರಣಬಸಪ್ಪ ವಿ.ಪಾಟೀಲ ಅವರು, ಡಾ.ಪರಮೇಶ್ವರ್‌ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿಗಳು ನೂತನ ಉಪನಿರ್ದೇಶಕರಿಗೆ ಹೂಗುಚ್ಚ ನೀಡಿ ಶುಭಕೋರಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News