ಕಲಬುರಗಿ: ಡಾ.ಶರಣಬಸವಪ್ಪ ಅಪ್ಪ ನಿಧನ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಆದೇಶ
Update: 2025-08-15 12:04 IST
ಕಲಬುರಗಿ: ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೆಯ ಪೀಠಾಧಿಪತಿ, ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿದ್ದ ಡಾ.ಶರಣಬಸವಪ್ಪ ಅಪ್ಪ ಅವರ ಅಂತಿಮ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಲಾಗಿದೆ.
ಈ ಕುರಿತು ರಾಜ್ಯಸರ್ಕಾರದ ಪರವಾಗಿ ಸಿಆಸುಇ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ-1(ಪ್ರ) ಬಾಣದರಂಗಯ್ಯ.ಎನ್.ಆರ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ಆ.14 ರಂದು ನಿಧನರಾಗಿರುವ ಕಲಬುರಗಿ ಜಿಲ್ಲೆಯ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಹಾಗೂ ಶ್ರೀ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿದ್ದ ಶ್ರೀ ಶರಣಬಸವಪ್ಪ ಅಪ್ಪ ಇವರ ನಿಧನಕ್ಕೆ ಸರ್ಕಾರವು ತೀವು ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಕರ್ನಾಟಕರಾಜ್ಯಪಾಲರ ಆಜ್ಞಾನುಸಾರ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.