ಕಲಬುರಗಿ: ಕಮಲಾಪುರ ತಾಲೂಕಿನ ಮಹಾಗಾಂವ್ ತಾಂಡದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದ್ದು, ಕೂಡಲೇ ಹೊಸ ಬೋರ್‌ವೆಲ್ ಕೊರೆಸುವಂತೆ ಆಗ್ರಹಿಸಿ ನವ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ದಯಾನಂದ ಸಿ. ಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮಹಾಗಾಂವ್ ತಾಂಡದಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಈ ಹಿಂದೆ ಇದ್ದ ಬೋರ್‌ವೆಲ್‌ನಲ್ಲಿ ನೀರು ಬಾರದ ಕಾರಣ ನಿವಾಸಿಗಳು ಕುಡಿಯುವ ನೀರಿಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನೀರಿಗಾಗಿ ದಿನವಿಡೀ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದೈನಂದಿನ ಕೆಲಸಕಾರ್ಯಗಳಿಗೂ ಅಡಚಣೆಯಾಗುತ್ತಿದೆ. ತಾಂಡದಲ್ಲಿ ಬೇರೆ ಯಾವುದೇ ಮೂಲದಿಂದ ನೀರು ಲಭ್ಯವಿಲ್ಲದ ಕಾರಣ ಜನರು ಸಂಕಷ್ಟ ಎದುರಿಸುತ್ತಿದ್ದಾರೆ.

ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಮಹಾಗಾಂವ್ ತಾಂಡದಲ್ಲಿ ಕೂಡಲೇ ಹೊಸ ಬೋರ್‌ವೆಲ್ ಕೊರೆಸಿ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಜನರು ನೀರಿಗಾಗಿ ಅನುಭವಿಸುತ್ತಿರುವ ಸಂಕಷ್ಟವನ್ನು ನಿವಾರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಸಂತೋಷ್, ರಾಜು, ಶಿವರಾಮ, ಸುಭಾಷ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor