ಕಲಬುರಗಿ | ದಲಿತರ ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣವೇ ಪರಿಹಾರ : ಬಸವರಾಜ ಜವಳಿ
ಕಲಬುರಗಿ : ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಸಾಮಾಜಿಕ ನ್ಯಾಯಕ್ಕಾಗಿ) ವತಿಯಿಂದ ನಗರದ ಕನ್ನಡ ಭವನದಲ್ಲಿ ಶೋಷಿತ ಜನಜಾಗೃತಿ ವೇದಿಕೆಯ ನೂತನ ಜಿಲ್ಲಾಧ್ಯಕ್ಷರಾದ ಲಕ್ಕಪ್ಪ ಎಸ್.ಜವಳಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಯಿತು.
ದಲಿತ ಮಾದಿಗ ಸಮನ್ವಯ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಜವಳಿ ಮಾತನಾಡಿ, ದಲಿತರ ಎಲ್ಲಾ ಸಮಸ್ಯೆಗಳಿಗೆ ಪರಿಹಾರವೇ ಶಿಕ್ಷಣ ಎಂಬುವುದನ್ನು ಅರಿತು ಪ್ರತಿಯೊಬ್ಬ ಪಾಲಕರು ಮಕ್ಕಳಿಗೆ ಶಿಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ಹೋರಾಟಗಾರರು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಜನಜಾಗೃತಿ ಮೂಡಿಸಬೇಕು ಎಂದರು.
ದಲಿತ ಸಂಘರ್ಷ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ದಶರಥ ಕಲಗೂರ್ತಿ, ಲಕ್ಕಪ್ಪ ಎಸ್.ಜವಳಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಮಾಜ ಚಿಂತಕ ಡಾ.ಮಾಣಿಕರಾವ ಕಟ್ಟಿಮನಿ, ದಲಿತ ಮಾದಿಗ ಸಮನ್ವಯ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಜವಳಿ, ಮಾದಿಗ ದಂಡೋರ ಹೋರಾಟ ಸಮಿತಿ ರಾಜ್ಯ ಯುವ ಮುಖಂಡ ರಾಜು ಹದನೂರ, ಗುರುರಾಜ ಭಂಡಾರಿ, ಮಾದಿಗ ಸಮಾಜದ ಜಿಲ್ಲಾ ಮುಖಂಡ ಶರಣು ಸಗರಕರ, ಗಣೇಶ ಕಟ್ಟಿಮನಿ, ಸಚಿನ ಕಟ್ಟಿಮನಿ, ಜಿಲ್ಲಾ ಕಾಂಗ್ರೆಸ್ ಯುವ ಮುಖಂಡ ಪರಶುರಾಮ ನಾಟಿಕರ, ಅಲೆಮಾರಿ ಸಂಘದ ಜಿಲ್ಲಾ ಮುಖಂಡ ಶರಣಬಸಪ್ಪ ಭಜಂತ್ರಿ, ಡಾ. ಬಾಬುಜಗಜೀವನರಾಮ ಜಯಂತೋತ್ಸವ ಸಮಿತಿ ಜಿಲ್ಲಾಧ್ಯಕ್ಷ ರಂಜಿತ ಮೂಲಿಮನಿ, ಅಮೃತ ಕೊರಳ್ಳಿ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.