Kalaburagi | ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ: ಅರ್ಜಿ ಆಹ್ವಾನ

Update: 2026-08-11 20:07 IST

ಕಲಬುರಗಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿಯುಳ್ಳ ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ 2026ರ ಆ.18 ರಿಂದ 27ರವರೆಗೆ ಹತ್ತು ದಿನಗಳ ಕಾಲ ಉಚಿತವಾಗಿ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕಲಬುರಗಿ ಸಿಡಾಕ್ ಸಲಹೆಗಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ವಯೋಮಿತಿ 20 ರಿಂದ 40 ವರ್ಷದೊಳಗಿನ ಕನಿಷ್ಠ ಎಸೆಸೆಲ್ಸಿ ಪಾಸ್/ಫೇಲಾದ ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳು ಸಿಡಾಕ್ ಕಚೇರಿ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ (ವಿಭಾಗೀಯ ಕಚೇರಿ) ಸಿಓಇ ಕಟ್ಟಡ, ಸರ್ಕಾರಿ ಬಾಲಕರ ಐಟಿಐ ಆವರಣ, ಎಂ.ಎಸ್.ಕೆ. ಮಿಲ್ ರಸ್ತೆ, ಕಲಬುರಗಿ-585102 ಇಲ್ಲಿಗೆ 8884872109 / 9108972833 ಮೊಬೈಲ್ ಸಂಖ್ಯೆಗೆ ಅಥವಾ ನೇರವಾಗಿ 2026ರ ಆಗಸ್ಟ್ 17 ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೋಬೈಲ್ ಸಂಖ್ಯೆ 8884872109/ 9108972833 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News