×
Ad

ಕಲಬುರಗಿ | ಪರಿಸರ ರಕ್ಷಣೆಗೆ ಪರಿಸರ ಸ್ನೇಹಿ ಗಣಪ ಸ್ಥಾಪಿಸಿ: ಡಾ.ರಾಜೇಂದ್ರ ಕೊಂಡಾ

Update: 2025-08-23 17:44 IST

ಕಲಬುರಗಿ: ಪರಿಸರ ರಕ್ಷಣೆಗೆ ಪರಿಸರ ಸ್ನೇಹಿ ಗಣಪ ತಯಾರಿಸಿ ಪ್ರತಿಷ್ಠಾಪಿಸಬೇಕು ಎಂದು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ರಾಜೇಂದ್ರ ಕೊಂಡಾ ಹೇಳಿದರು.

ಹೈದರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿನಿಯರಿಂದ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳ ತಯಾರಿ ಶಿಬಿರಕ್ಕೆ ಚಾಲನೆ ನೀಡಿ, ಮಾತನಾಡಿದರು.

ಪರಿಸರ ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ, ನಾವು ಆದಷ್ಟು ಪರಿಸರ ರಕ್ಷಣೆ ಮಾಡಬೇಕು. ಈ ಕಾರಣಕ್ಕಾಗಿಯೇ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಕಲಿಕೆಯ ಜೊತೆಗೆ ಅವರಲ್ಲಿರುವ ಕೌಶಲ್ಯ ಅಭಿವೃದ್ಧಿಗಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಶಿಬಿರದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು ಎಂದು ಕಾಲೇಜಿನ ಪತ್ರಿಕಾ ಮಾಧ್ಯಮ ಸಲಹೆಗಾರರಾದ ಡಾ.ಮೋಹನರಾಜ ಪತ್ತಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News