ಕಲಬುರಗಿ | ಮಳಖೇಡ ರೋಡ್ ನಿಲ್ದಾಣದಲ್ಲಿ ನಿಲ್ಲಲಿದೆ ಎಕ್ಸ್‌ಪ್ರೆಸ್ ರೈಲು : ಸಚಿವ ಶರಣಪ್ರಕಾಶ್ ಪಾಟೀಲ್
ಕಲಬುರಗಿ: ಸೇಡಂನ ಮಳಖೇಡ ರೋಡ್ ನಿಲ್ದಾಣದಲ್ಲಿ ತಿರುಪತಿ-ನಿಝಾಮುದ್ದೀನ್ ರಾಯಲಸೀಮಾ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ರೈಲ್ವೇ ಇಲಾಖೆ ಆದೇಶಿಸಿದೆ. ನಮ್ಮ ಮನವಿಗೆ ಸ್ಪಂದಿಸಿದ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕಳೆದ ಕೆಲವು ದಿನಗಳಿಂದ ಹಿಂದೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರನ್ನು ಭೇಟಿ ಮಾಡಿ, ತಿರುಪತಿ-ನಿಝಾಮುದ್ದೀನ್ ರಾಯಲಸೀಮಾ ಎಕ್ಸ್‌ಪ್ರೆಸ್ ರೈಲು ಸೇಡಂ ವಾಯ ಮಳಖೇಡ ರೋಡ್ ನಿಲ್ದಾಣದಲ್ಲಿ ನಿಲುಗಡೆ ಕುರಿತು ಮನವಿ ಸಲ್ಲಿಸಲಾಗಿತ್ತು, ಸೇಡಂ ಕ್ಷೇತ್ರದ ಜನರ ಹಾಗೂ ಪ್ರಯಾಣಿಕರ ಪರವಾಗಿ ವಿ.ಸೋಮಣ್ಣ ಅವರಿಗೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕೃತಜ್ಞತೆಗಳನ್ನು ತಿಳಿಸಿದ್ದಾರೆ.
ಇನ್ನು ಮುಂದೆ ಸೇಡಂ ವಾಯ ಮಳಖೇಡ ರೋಡ್ ನಿಲ್ದಾಣದಲ್ಲಿ ತಿರುಪತಿ-ನಿಝಾಮುದ್ದೀನ್ ರಾಯಲಸೀಮಾ ಎಕ್ಸ್‌ಪ್ರೆಸ್ ರೈಲು ನಿಲುಗಡೆಯಾಗಿರುವುದು ಸಂತಸದ ಸಂಗತಿ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.