×
Ad

ಕಲಬುರಗಿ| ಸರಕಾರಿ ಮಹಾವಿದ್ಯಾಲಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Update: 2025-09-01 22:32 IST

ಕಲಬುರಗಿ: ಇಂದಿನ ಆಧುನಿಕ ಜಗತ್ತಿನಲ್ಲಿ ನಾವು ಕೇವಲ ಒಂದು ಭಾಷೆಗೆ ಸೀಮಿತವಾಗದೇ ಹೆಚ್ಚು ಹೆಚ್ಚು ಭಾಷೆಗಳು ಕಲಿಯುವುದು ಅನಿವಾರ್ಯ ಎಂದು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ.ಪ್ರೇಮಚಂದ ಚವ್ಹಾಣ್‌ ಹೇಳಿದರು.

ನಗರದ ಸ್ವಾಯತ್ತ ಸರಕಾರಿ ಮಹಾವಿದ್ಯಾಲಯದ ಹಿಂದಿ ವಿಭಾಗದ ಸ್ನಾತಕೋತ್ತರ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿdರು.

ಮುಂದುವರೆದು ಮಾತನಾಡಿದ ಅವರು, ಇಂದು ನಾವು ನಮ್ಮ ಮಾತೃ ಭಾಷೆಯೊಂದಿಗೆ ಹೆಚ್ಚು ಹೆಚ್ಚು ಭಾಷೆ ಕಲಿಯುವುದು ಅನಿವಾರ್ಯ, ಭಾರತದ ಮೂಲೆ ಮೂಲೆಗಳಲ್ಲಿ ಕೆಲಸ ಮಾಡಬೇಕಾದ ಸಂದರ್ಭ ಬಂದರೆ ಆ ಸಂದರ್ಭದಲ್ಲಿ ಬೇರೆ ಸಂಪರ್ಕ ಭಾಷೆಯ ಅನಿವಾರ್ಯತೆ ಬೇಕಾಗುತ್ತದೆ. ಹೀಗಾಗಿ ನಮಗೆ ಕೇವಲ ಒಂದು ಭಾಷೆಗೆ ಸೀಮಿತವಾಗದೇ ಹೆಚ್ಚು ಹೆಚ್ಚು ಭಾಷೆಗಳು ಕಲಿಯುವುದು ಅನಿವಾರ್ಯ ಎಂದು ಹೇಳಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಸವಿತಾ ತಿವಾರಿ ಮಾತನಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಡಾ.ಅನುಸೂಯಾ ಗಾಯಕ್ವಾಡ್, ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಶಂಕರ ರಾಠೋಡ, ವಿಭಾಗದ ಹಿರಿಯ ಉಪನ್ಯಾಸಕರಾದ ಡಾ.ಮಿಲನ ಕಾಂಬ್ಳೆ ಮತ್ತು ವಿಭಾಗದ ಪ್ರಥಮ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News