ಕಲಬುರಗಿ | ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕರಾಗಿ ಫಾರೂಕ್ ಪಟೇಲ್ ಮುದಬಾಳ ಆಯ್ಕೆ
Update: 2026-01-29 18:13 IST
ಕಲಬುರಗಿ : ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಲಬುರಗಿ ಜಿಲ್ಲಾ ಸಂಚಾಲಕರಾಗಿ ಫಾರೂಕ್ ಪಟೇಲ್ ಮುದಬಾಳ ಅವರನ್ನು ಆಯ್ಕೆ ಮಾಡಲಾಗಿದೆ.
ಈ ನೇಮಕಕ್ಕೆ ಕಾರಣಿಕರ್ತರಾದ ಕರ್ನಾಟಕ ರಾಜ್ಯ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಿದ್ದು ಹಳ್ಳೆಗೌಡ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ, ಕಲಬುರಗಿ ಜಿಲ್ಲಾ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಶರಣ ಪ್ರಕಾಶ್ ಪಾಟೀಲ್ ಸೇರಿದಂತೆ ಶಾಸಕರು ಹಾಗೂ ಪಕ್ಷದ ಹಿರಿಯ ಮುಖಂಡರಿಗೆ ಫಾರೂಕ್ ಪಟೇಲ್ ಮುದಬಾಳ ಅವರು ಕೃತಜ್ಞತೆ ಸಲ್ಲಿಸಿದರು.
ನನಗೆ ನೀಡಿರುವ ಜವಾಬ್ದಾರಿಯನ್ನು ನಿಷ್ಠೆ ಹಾಗೂ ಶ್ರದ್ದೆಯಿಂದ ನಿರ್ವಹಿಸುತ್ತೇನೆ. ಯುವ ಕಾಂಗ್ರೆಸ್ ಹಾಗೂ ಪಕ್ಷದ ಬಲವರ್ಧನೆಗಾಗಿ ಹಗಲಿರುಳು ಶ್ರಮಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.