ಕಲಬುರಗಿ | ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ ಸಿಬ್ಬಂದಿ
ಶಶಿಕಾಂತ್
ಕಲಬುರಗಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಪ್ರಥಮ ದರ್ಜೆ ಸಹಾಯಕರೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ನಡೆದಿದೆ.
ಕಮಲಾಪುರ ತಹಶೀಲ್ದಾರ್ ಕಾರ್ಯಾಲಯದಲ್ಲಿ ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಶಿಕಾಂತ್ ಜಂಜೀರ್ ಎಂಬಾತರೆ ಸಿಕ್ಕಿಬಿದ್ದ ಸಿಬ್ಬಂದಿಯಾಗಿದ್ದಾರೆ.
ಎಫ್‌ಡಿಎ ಶಶಿಕಾಂತ್ ಅವರು, ತಹಶೀಲ್ದಾರ್ ಅವರು ನಡೆಸಿದ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಆದೇಶ ಪ್ರತಿಯನ್ನು ನೀಡಲು ಫಲಾನುಭವಿಗಳಿಗೆ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡುವಂತೆ ಒತ್ತಾಯಿಸುತ್ತಿರುವುದರಿಂದ ಕಿಶನ್ ರಾಠೋಡ್ ಎಂಬಾತರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ತನಿಖಾಧಿಕಾರಿಯಾದ ಪೊಲೀಸ್ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ಮುರಗುಂಡಿ ಅವರ ನೇತೃತ್ವದಲ್ಲಿ ನಡೆಸಿದ ದಾಳಿಯಲ್ಲಿ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.