×
Ad

ಕಲಬುರಗಿ | ಶುಲ್ಕ ಮರುಪಾವತಿ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ವಿಸ್ತರಣೆ

Update: 2025-06-20 20:31 IST

ಕಲಬುರಗಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಸೌಲಭ್ಯಕ್ಕಾಗಿ 2024-25ನೇ ಸಾಲಿಗೆ ಮೆಟ್ರಿಕ್-ನಂತರದ ರಾಜೀವ್‌ ಗಾಂಧಿ ವಿಶ್ವವಿದ್ಯಾಲಯದ ಕೋರ್ಸ್‍ಗಳಲ್ಲಿ ಮಾತ್ರ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮನವಿ ಹಾಗೂ ಕೋರ್ಟ ಮಧ್ಯಂತರ ಆದೇಶದಂತೆ ರಾಜೀವ್‌ ಗಾಂಧಿ ವಿಶ್ವವಿದ್ಯಾಲಯದ ಕೋರ್ಸುಗಳಿಗೆ “ಶುಲ್ಕ ಮರುಪಾವತಿ” ಕಾರ್ಯಕ್ರಮಕ್ಕೆ ಮಾತ್ರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಹ ಅಭ್ಯರ್ಥಿಗಳು https://ssp.postmatric.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.

ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ಜೂನ್ 15 ರಂದು ನಿಗದಿಪಡಿಸಲಾಗಿತ್ತು. ಹೆಚ್ಚಿನ ಮಾಹಿತಿಗಾಗಿ http://bcwd.karnataka.gov.in ವೆಬ್‍ಸೈಟ್‍ನ್ನು, ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ 8050770005, ಇ-ಮೇಲ್- bcwdhelpline@gmail.com, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in, ದೂರವಾಣಿ ಸಂಖ್ಯೆ 1902 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News