ಕಲಬುರಗಿ | ಎಂ.ಫಿಲ್, ಪಿಎಚ್.ಡಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ
ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಎಂ.ಫಿಲ್. ಮತ್ತು ಪಿಎಚ್.ಡಿಗೆ ನೋಂದಣಿಯಾಗಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್‍ದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಸೇರಿದವರಾಗಿರಬೇಕು. ಕೋರ್ಸ್ ಪೂರ್ಣಕಾಲಿಕ ವಿದ್ಯಾರ್ಥಿಗಳು ಮಾತ್ರ ಅರ್ಹರಿರುತ್ತಾರೆ. ಪಿ.ಎಚ್.ಡಿ/ಎಂ.ಫಿಲ್ ವ್ಯಾಸಂಗವನ್ನು ಭಾರತ/ಕರ್ನಾಟಕ ರಾಜ್ಯದ ಶಾಸನಬದ್ಧ ಅಂಗೀಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಮಾಡಬೇಕು. ಗರಿಷ್ಟ ವಯೋಮಿತಿ 35 ವರ್ಷ ಮೀರಿರಬಾರದು. ವಿದ್ಯಾರ್ಥಿಯ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ 8 ಲಕ್ಷ ರೂ. ಮೀರಿರಬಾರದು. ವಿದ್ಯಾರ್ಥಿಯು ಯಾವುದೇ ಸರ್ಕಾರಿ ಉದ್ಯೋಗಿಯಾಗಿರಬಾರದು.
ಅರ್ಹ ಅರ್ಜಿದಾರರು ttps://sevasindu.karnataka.gov.in/sevasindhu/Department services ವೆಬ್‍ಸೈಟ್ ನಲ್ಲಿ ಲಿಂಕ್ ಮೂಲಕ ಆನ್‍ಲೈನ್ ಮೂಲಕ 2025ರ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ಅರ್ಜಿ ಸಲ್ಲಿಸಿದ ಹಾರ್ಡ್ ಕಾಪಿಯನ್ನು ಅಗತ್ಯ ದಾಖಲೆಗಳೊಂದಿಗೆ ನಗರಾಭಿವೃದ್ದಿ ಪ್ರಾಧಿಕಾರ ಆಯುಕ್ತರ ಕಚೇರಿಯ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ವಿವರವಾದ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀಕೃತ https://dom.karnataka.gov.in https://dom.karnataka.gov.in ವೆಬ್‍ಸೈಟ್‍ಗೆ ಸಂಪರ್ಕಿಸಲು ಕೋರಲಾಗಿದೆ.