ಕಲಬುರಗಿ | ಕಬ್ಬಿನ ಹೊಲಕ್ಕೆ ಬೆಂಕಿ: ಅಪಾರ ನಷ್ಟ
Update: 2025-12-21 23:39 IST
ಕಲಬುರಗಿ: ಅಫಜಲಪುರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ರವಿವಾರ ಕಬ್ಬಿನ ಹೊಲಕ್ಕೆ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.
ಅರ್ಜುಣಗಿ ಗ್ರಾಮದ ಚಾಂದ್ ರಾಜಾ ಪಟೇಲ್ ಅವರ ಗದ್ದೆಯಲ್ಲಿ ಹೊತ್ತಿಕೊಂಡ ಬೆಂಕಿ ಪಕ್ಕದ ಸರಸಂಬಿ ಅವರ ಹೊಲಕ್ಕೂ ವಿಸ್ತರಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಬೆಳೆ ಸುಟ್ಟು ಭಸ್ಮವಾಗಿದೆ.
ಘಟನೆಯ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ರೇವೂರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.