×
Ad

ಕಲಬುರಗಿ | ಯುವಕನ ಮೇಲೆ ಫೈರಿಂಗ್ : ಇಬ್ಬರ ಬಂಧನ

Update: 2024-09-26 14:21 IST

ಕಲಬುರಗಿ : ಸ್ನೇಹಿತರು ಸೇರಿ ಪಾರ್ಟಿ ಮಾಡುವ ವೇಳೆ ಸ್ನೇಹಿತನೊಬ್ಬನ ಮೇಲೆ ಗುಂಡಿನ ದಾಳಿ ಮಾಡಿರುವ ಘಟನೆ ಆಳಂತ ತಾಲ್ಲೂಕಿನ ಕಡಗಂಚಿ ಗ್ರಾಮದಲ್ಲಿ ನಡೆದಿದೆ.

ಕಡಗಂಚಿ ಗ್ರಾಮದ ಶಾಂತಪ್ಪ ಪೂಜಾರಿ (28) ಎಂಬವರ ಎಡಗೈಗೆ ಗುಂಡು ತಾಗಿದ್ದು, ಕಲಬುರಗಿಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಂತಪ್ಪ ವಿರುದ್ಧ ದರೋಡೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬುಧವಾರ ತಡರಾತ್ರಿ ಕಡಗಂಚಿ ಗ್ರಾಮದ ಮನೆಯೊಂದರಲ್ಲಿ ಶ್ರೀಕಾಂತ್, ಮಾಳಪ್ಪ ಸೇರಿದಂತೆ ಆರೇಳು ಮಂದಿ ಸ್ನೇಹಿತರು ಸೇರಿಕೊಂಡು ಪಾರ್ಟಿ ಮಾಡುತ್ತಿರುವಾಗ ಜಗಳ ಉಂಟಾಗಿದೆ. ಬಳಿಕ ಈ ಜಗಳ ವಿಕೋಪಕ್ಕೆ ತಿರುಗಿ ಗುಂಡಿನ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

ಪಿಸ್ತೂಲು ಸಹಿತ ಆರೋಪಿಗಳಾದ ಕಾಂತಪ್ಪ ಮತ್ತು ಮಾಳಪ್ಪ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಯ ಕುರಿತು ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News