×
Ad

ಕಲಬುರಗಿ | ಪೊಲೀಸರಿಗೆ ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮ

Update: 2025-06-17 20:26 IST

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲೆಯ ಪೊಲೀಸ್ ಸಿಬ್ಬಂದಿಗಳಿಗಾಗಿ ತುರ್ತು ಪರಿಸ್ಥಿತಿಯಲ್ಲಿ ಪ್ರಥಮ ಚಿಕಿತ್ಸೆ ನೀಡುವ ಕುರಿತು ವಿಶೇಷ ತರಬೇತಿ ಕಾರ್ಯಕ್ರಮ ನಡೆಯಿತು.

ಪ್ರಥಮ ದಿನದ ತರಬೇತಿಯಲ್ಲಿ ಆಸ್ಪತ್ರೆಯ ತುರ್ತು ಸೇವಾ ಘಟಕ ಮುಖ್ಯಸ್ಥರಾದ ಡಾ.ಚೈತನ್ಯ ಕೊಂಡಬಾಲ ಅವರು ಜಿಲ್ಲೆಯ ಸುಮಾರು ತೊಂಬತ್ತೈದು ಪೊಲೀಸ್ ಸಿಬ್ಬಂದಿಗಳಿಗೆ ತರಬೇತಿ ನೀಡಿದರು.

ಗಲಭೆ, ಅಗ್ನಿ ಅವಘಡ, ದುರಂತ ರಸ್ತೆ ಅಪಘಾತ ಮುಂತಾದ ಸಂದಿಗ್ಧ ಪರಿಸ್ಥಿತಿಗಳನ್ನು ನಿಭಾಯಿಸುವಾಗ ಪೊಲೀಸ್ ಸಿಬ್ಬಂದಿಗಳು ಪ್ರಥಮ ಚಿಕಿತ್ಸೆ ಕೊಡುವ ವಿಧಾನ, ಸ್ಪಂದಿಸುವ ಕ್ರಮ, ಅನುಸರಿಸುವ ನೀತಿ ಕುರಿತು ಸವಿಸ್ತಾರವಾಗಿ ಪ್ರಾಯೋಗಿಕ ಪ್ರಾತ್ಯಕ್ಷಿಕೆ ಮೂಲಕ ಉಪನ್ಯಾಸ ನೀಡಿ ತರಬೇತಿ ನೀಡಿದರು.

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ.ನಮೋಶಿ, ಉಪಾಧ್ಯಕ್ಷರಾದ ರಾಜಾ ಭಿ.ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ.ಕೈಲಾಸ ಪಾಟೀಲ್, ಆಸ್ಪತ್ರೆಯ ಸಂಚಾಲಕರಾದ ಡಾ.ಕಿರಣ್ ದೇಶಮುಖ್ ಹಾಗೂ ಆಡಳಿತ ಮಂಡಳಿ ಸದಸ್ಯರು ಆಸ್ಪತ್ರೆಯು ಪೋಲಿಸ್ ಸಿಬ್ಬಂದಿಗಳಿಗೆ ಇಂತಹ ತರಬೇತಿ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕರಾದ ಡಾ.ಆನಂದ ಗಾರಂಪಳ್ಳಿ, ಶರಣು ಪಾಟೀಲ್, ಆಸ್ಪತ್ರೆಯ ಕಾರ್ಯಕ್ರಮದ ಸಂಯೋಜಕಿ ಪ್ರೀಯದರ್ಶೀನಿ ಬೆಂಗಾಳಿ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News