×
Ad

ಕಲಬುರಗಿ | ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ

Update: 2024-12-06 16:53 IST

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ 68ನೇ ಮಹಾಪರಿನಿರ್ವಾಣ ದಿನದ ನಿಮಿತ್ತ ನಗರದ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ರವರ ಪುತ್ಥಳಿಗೆ ಪೂಜ್ಯ ಸಂಘಾನಂದ ಬಂತೆ ಪುಷ್ಪಾರ್ಚನೆ ಮಾಡಿದರು.

ಪ್ರತಿಮೆಗೆ ವಿಧಾನ ಪರಿಷತ್ತು ಶಾಸಕರಾದ ಡಾ.ತಳವಾರ ಸಾಬಣ್ಣ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಬಿ.ಪೌಝಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ., ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರಸಿಂಗ್ ಮೀನಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸ್, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಅವಿನಾಶ ಶಿಂಧೆ, ಕಲಬುರಗಿ ಸಹಾಯಕ ಆಯುಕ್ತೆ ಸಾಹಿತ್ಯ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಅಲ್ಲಾಬಕ್ಷ್, ಉತ್ಸವ ಸಮಿತಿ ಅಧ್ಯಕ್ಷರಾದ ಮಹೇಶ ಹುಬ್ಬಳ್ಳಿ ಸೇರಿದಂತೆ ವಿವಿಧ ಗಣ್ಯವಕ್ತಿಗಳು ಮಾರ್ಲಾಪಣೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ಪಂಚಶೀಲ ಧ್ವಜವನ್ನು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಮತ್ತು ನೀಲಿ ಧ್ವಜವನ್ನು ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಧ್ವಜಾರೋಹಣವನ್ನು ನೇರವೇರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ, ಎಸ್ಸಿ/ಎಸ್ಟಿ ನೌಕರರ ಗೌರವ ಅಧ್ಯಕ್ಷರಾದ ಸೋಮಶೇಖರ ಎಸ್.ಮದನಕರ್, ಅಧ್ಯಕ್ಷ ಡಾ.ರಾಜೇಂದ್ರ ಬಾಲ್ಕೆ, ಪ್ರಧಾನ ಕಾರ್ಯದರ್ಶಿ ನರಸಪ್ಪ ಟಿ.ರಂಗೋಲಿ, ಸುರೇಶ ಹಾದಿಮನಿ ಸಮಾಜ ಮುಖಂಡರುಗಳಾದ ಚಂದ್ರಕಾಂತ ಅಷ್ಟಗಿ, ಕಕ್ಕಯ ಡೋರ ಸಮಾಜ ಅಧ್ಯಕ್ಷರಾದ ಸೈಬಣ್ಣ ಹೋಳ್ಕರ್ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News