ಕಲಬುರಗಿ: ನಗರದ ವಾರ್ಡ್ ಸಂಖ್ಯೆ 13ರ ಇಸ್ಲಾಮಾಬಾದ್ ಕಾಲೊನಿಯ 9ನೇ ಮತ್ತು 10ನೇ ಕ್ರಾಸ್‌ಗಳಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಕೆಎಸ್‌ಐಸಿ ಅಧ್ಯಕ್ಷೆ ಹಾಗೂ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ ಶಂಕುಸ್ಥಾಪನೆ ನೆರವೇರಿಸಿದರು.

ಅಂದಾಜು 1.50 ಲಕ್ಷ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಈ ಕಾಮಗಾರಿಯಿಂದ ಕಾಲೊನಿಯ ರಸ್ತೆ ಸಂಪರ್ಕ ಸುಧಾರಿಸುವುದರ ಜೊತೆಗೆ ಚರಂಡಿ ವ್ಯವಸ್ಥೆಯೂ ಅಭಿವೃದ್ಧಿಯಾಗಲಿದೆ. ಸ್ಥಳೀಯ ನಿವಾಸಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಮಹಾಪೌರ ಅಜ್ಮಲ್ ಗೋಲಾ, ಫರಾಜ್ ಉಲ್ ಇಸ್ಲಾಂ, ವಹೀದ್ ಅಲಿ ಫತೇಹ್‌ಖಾನಿ, ಮಾಜಿ ಮೇಯರ್ ಸೈಯದ್ ಅಹ್ಮದ್, ವಾರ್ಡ್ 13ರ ಪಾಲಿಕೆ ಸದಸ್ಯ ತಹಸೀನ್ ಬಾಗ್‌ಬಾನ್, ಜೈದ್ ಇಸ್ಲಾಂ, ಅಜರ್ ಬಾಗ್‌ಬಾನ್, ಅಸದ್ ಅಲಿ ಅನ್ಸಾರಿ ಸೇರಿದಂತೆ ಸ್ಥಳೀಯ ನಿವಾಸಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ