ಕಲಬುರಗಿ | ಎಂ.ಎಸ್.ಇರಾಣಿ ಪದವಿ ಮಹಾವಿದ್ಯಾಲಯದ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಅಂತರರಾಷ್ಟ್ರೀಯ ವೈದ್ಯಕೀಯ ದಿನಾಚರಣೆ ಅಂಗವಾಗಿ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದ ಎಲ್ಲ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.
ಸಿಬ್ಬಂದಿಗಳಿಗೆ ರಕ್ತ ತಪಾಸಣೆ, ಇಸಿಜಿ, ರಕ್ತದೊತ್ತಡ ಹಾಗೂ ಅವಶ್ಯಕತೆ ಇರುವ ಸಿಬ್ಬಂದಿಗಳಿಗೆ ಎಂಆರ್‌ಐ ದಂತಹ ತಪಾಸಣೆ ಮಾಡಿ ತಜ್ಞ ವೈದ್ಯರಿಂದ ಉಚಿತ ಸಲಹೆ ನೀಡಲಾಯಿತು. ಹಾಗೂ ಅವಶ್ಯಕತೆ ಇರುವವರಿಗೆ ಉಚಿತ ಔಷಧೋಪಚಾರ ನೀಡಲಾಯಿತು.
ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಆಸ್ಪತ್ರೆಯ ಸಂಚಾಲಕರಾದ ಡಾ.ಕಿರಣ್ ದೇಶಮುಖ್, ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಸಂಚಾಲಕರಾದ ಡಾ ಶರಣಬಸಪ್ಪ ಹರವಾಳ ಕಾಲೇಜಿನ ಡಿನ್ ಡಾ.ಶರಣಗೌಡ ಪಾಟೀಲ್ ಬಸವೇಶ್ವರ ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕರಾದ ಡಾ.ಆನಂದ ಗಾರಂಪಳ್ಳಿ, ಡಾ ಎಂ.ಆರ್.ಪೂಜಾರಿ,ಇರಾಣಿ ಕಾಲೇಜಿನ ಪ್ರಾಚಾರ್ಯರಾದ ಮಲ್ಲಪ್ಪ ಭೋತಗಿ ಕಾಲೇಜಿನ 12 ಅಂಶಗಳ ಸಂಯೋಜಕಿ ಮೈತ್ರಾದೇವಿ ಹಳಮನಿ ಉಪಸ್ಥಿತರಿದ್ದರು.