×
Ad

ಕಲಬುರಗಿ | ಕ್ರೀಡಾ ಚಟುವಟಿಕೆಗಳಿಗೂ ಮಹತ್ವ ನೀಡಿ: ವರ್ಷಾ ರಾಜೀವ ಜಾನೆ

ಸಂವಿಧಾನ ಪ್ರೀಮಿಯರ್ ಲೀಗ್ ಮಹಿಳಾ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

Update: 2026-01-23 19:26 IST

ಕಲಬುರಗಿ: ವಿದ್ಯಾರ್ಥಿನಿಯರು ಓದುವ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೂ ಮಹತ್ವ ನೀಡಬೇಕು. ಕ್ರೀಡಾ ಚಟುವಟಿಕೆ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರಯತ್ನವೇ ಗೆಲುವೆಂದು ಭಾವಿಸಿ ಎಂದು ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರರಾದ ವರ್ಷಾ ಜಾನೆ ಮಹಿಳಾ ಕ್ರೀಡಾಪಟುಗಳಿಗೆ ಸಲಹೆ ನೀಡಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ಸಂಘ ಸಂವಿಧಾನ ದಿನಾಚರಣೆ ಅಂಗವಾಗಿ ದೈಹಿಕ ಶಿಕ್ಷಣ ವಿಭಾಗದ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಸಂವಿಧಾನ ಪ್ರೀಮಿಯರ್ ಲೀಗ್-2026 ಮಹಿಳಾ ತಂಡಗಳ ಕ್ರಿಕೆಟ್ ಪಂದ್ಯಾವಳಿಯನ್ನು ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಮಹಿಳಾ ವಿಭಾಗದ ಇಂಡಿಯನ್ ಕ್ರಿಕೆಟ್, ಐಪಿಎಲ್ ಪಂದ್ಯಗಳಲ್ಲಿ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ. ಪುರುಷರಿಗಿಂತ ಮಹಿಳೆಯರ ಕ್ರಿಕೆಟ್ ಪಂದ್ಯಗಳು ರೋಚಕವಾಗಿ ನಡೆಯುತ್ತಿವೆ. ಅವರ ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ಕೂಡ ಸಿಗುತ್ತಿದೆ. ವಿದ್ಯಾರ್ಥಿನಿಯರಿಗಾಗಿ ಕ್ರಿಕೆಟ್ ಪಂದ್ಯ ಆಯೋಜಿಸಿರುವ ಅತಿಥಿ ಉಪನ್ಯಾಸಕರ ಸಂಘಕ್ಕೆ ಅಭಿನಂದನೆ ತಿಳಿಸಿದ ಅವರು, ಮಹಿಳೆಯರಿಗೆ ಇದೊಂದು ಸುವರ್ಣಾವಕಾಶ. ತಂಡಗಳು ಉತ್ತಮ ಪ್ರದರ್ಶನ ನೀಡಿ ಶ್ರೇಯಸ್ಸು ನಿಮಗೆ ಸಿಗಲೆಂದು ಶುಭ ಹಾರೈಸಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ವಿತ್ತಾಧಿಕಾರಿ ಜಯಾಂಬಿಕ ಮಾತನಾಡಿ, ಜೀವನದ ಉನ್ನತಿಗೆ ಆರೋಗ್ಯವೇ ಸಂಪತ್ತು. ಮಾನಸಿಕ ಆರೋಗ್ಯ ಮತ್ತು ದೈಹಿಕ ಸದೃಢತೆ ಬೆಳೆಸಿಕೊಂಡರೆ ಕ್ರೀಡಾ ಕ್ಷೇತ್ರಗಳಲ್ಲಿ ಯಶಸ್ಸು ಕಾಣಬಹುದು. ಕ್ರಿಕೆಟ್ ಪಂದ್ಯದಲ್ಲಿ ಸೋಲು ಗೆಲುವು ಮುಖ್ಯವಲ್ಲ ಎಂದರು.

ಕಲಬುರಗಿ ಮಹಾನಗರ ಪಾಲಿಕೆ ಉಪ ಮಹಾಪೌರರಾದ ತೃಪ್ತಿ ಶ್ರೀನಿವಾಸ , ಕಲಬುರಗಿ ಆರ್‌ಜೆ ವಾಣಿಶ್ರೀ, ಅತಿಥಿ ಪಉನ್ಯಾಸಕರ ಸಂಘದ ಅಧ್ಯಕ್ಷ ಡಾ.ಅರುಣಕುಮಾರ ಕುರನೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೇಷ್ಮಿ ಏಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಗೀತಾ ರೇಷ್ಮಿ ಹಾಗೂ ಸೇಡಂ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣದ ನಿರ್ದೇಶಕ ಡಾ. ಜಗನ್ನಾಥ ಪಟ್ಟಣಕರ್ ಮಾತನಾಡಿದರು.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಸಂಯೋಜನಾಧಿಕಾರಿ ಡಾ.ಸುರೇಶ್ ಜಂಗೆ , ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಅಶೋಕ ದೊಡ್ಮನಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News