×
Ad

ಕಲಬುರಗಿ | ತಳವಾರ, ಪರಿವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡಿ : ಚಂದ್ರಕಾಂತ ತಳವಾರ ಆಗ್ರಹ

Update: 2025-11-04 22:04 IST

ಕಲಬುರಗಿ : ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ತಳವಾರ ಹಾಗೂ ಪರಿವಾರ ಸಮುದಾಯದವರಿಗೆ ಕಳೆದ ಏಳು ತಿಂಗಳಿಂದ ಎಸ್ಟಿ ಪ್ರಮಾಣ ಪತ್ರ ಕೊಡುತ್ತಿಲ್ಲ, ಇದರಿಂದ ಸಾವಿರಾರು ಮಂದಿ ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ. ಕೂಡಲೇ ಎಸ್ಟಿ ಪ್ರಮಾಣ ಪತ್ರ ನೀಡಬೇಕೆಂದು ಕರ್ನಾಟಕ ರಾಜ್ಯ ತಳವಾರ ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಕಾಂತ ತಳವಾರ ಆಗ್ರಹಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ತಳವಾರ, ಪರಿವಾರ ಹಾಗೂ ಸಿದ್ಧಿ ಸಮುದಾಯಗಳಿಗೆ ಮೀಸಲಾತಿ ನೀಡುವಂತೆ ಈಗಾಗಲೇ ಗೆಜೆಟ್‌ ನೋಟಿಫಿಕೇಶನ್ ಹೊರಡಿಸಿದೆ. ಅದರಂತೆಯೇ 2020ರಿಂದ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡಲಾಗಿದೆ. ಆದರೆ ಕಳೆದ 7 ತಿಂಗಳಿಂದ ಜಿಲ್ಲೆಯಲ್ಲಿ ಪ್ರಮಾಣ ಪತ್ರ ವಿತರಿಸುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಜಾತಿ ಪ್ರಮಾಣ ಪತ್ರ ಕೊಡದೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ದಾಖಲಾಗಲು ತೊಂದರೆಯಾಗುತ್ತಿದೆ. ನೌಕರರಿಗಾಗಿ ಪ್ರಮಾಣ ಪತ್ರ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ರಾಜೇಂದ್ರ ರಾಜವಾಳ ಮಾತನಾಡಿ, ಅಧಿಕಾರಿಗಳು ಎಸ್ಟಿ ಪ್ರಮಾಣ ಪತ್ರ ನೀಡದಿರುವ ಬಗ್ಗೆ ಅನೇಕ ಸಲ ಉಸ್ತುವಾರಿ ಸಚಿವರನ್ನು ಭೇಟಿಗಾಗಿ ಸಮಯ ಕೇಳಿದ್ದೇವೆ, ಅವರು ಈವರೆಗೆ ನಮಗೆ ಅವಕಾಶ ಕೊಟ್ಟಿಲ್ಲ. ತಳವಾರರಿಗೆ ನೀಡುವ ಪ್ರಮಾಣ ಪತ್ರ ಹಾಗೂ ಕೋಲಿ ಕಬ್ಬಲಿಗ ಜಾತಿಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಗೊಂದಲ ಸೃಷ್ಟಿ ಮಾಡುತ್ತಿರುವುದು ಕಾಣುತ್ತಿದೆ, ಇದನ್ನ ಮಾಡಲು ಯತ್ನಿಸಬಾರದು ಎಂದು ಅವರು ಹೇಳಿದ್ದಾರೆ.

ಕೂಡಲೇ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡದೆ ಹೋದಲ್ಲಿ ಶೀಘ್ರದಲ್ಲೇ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ರಾಜು ತಳವಾರ, ಶರಣು, ಗಿರೀಶ ತುಂಬಗಿ, ಗುರುನಾಥ ಹಾವನೂರು, ಚಂದ್ರಕಾಂತ ನಡಗಟ್ಟಿ, ಬೆಳ್ಳೆಪ್ಪ ಇಂಗನಕಲ್ಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News