×
Ad

ಕಲಬುರಗಿ | ಚದುರಂಗ ಸ್ಪರ್ಧೆಯಲ್ಲಿ ಗೋದುತಾಯಿ ಕಾಲೇಜಿಗೆ ಪ್ರಥಮ

Update: 2025-03-26 18:26 IST

ಕಲಬುರಗಿ : 2024-25ನೇ ಶೈಕ್ಷಣಿಕ ಸಾಲಿನ ಅಂತರ ಕಾಲೇಜುಗಳ ಚದುರಂಗ ಸ್ಪರ್ಧೆಯಲ್ಲಿ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಡಿಯಲ್ಲಿರುವ ನಗರದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರಾದ ಗೌರಿ ಶರಣಕುಮಾರ, ಅಪೂರ್ವ ಲಕ್ಷ್ಮಿಕಾಂತ್, ಸಾಧನಾ ಮೋಹನ ಪವಾರ್, ಭಾಗ್ಯವಂತಿ ರೇವಣಕುಮಾರ ಮತ್ತು ಕು.ಗರಿಮಾ ದಿಗಂಬರ್ ಭಾಗವಹಿಸಿದ್ದರು.

ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಮಿಲಿಂದಕುಮಾರ ಸುಳ್ಳದ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರ ಈ ಸಾಧನೆ ಮಾಡಿದ್ದು, ವಿದ್ಯಾರ್ಥಿನಿಯರ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪ, ಚೇರಪರ್ಸನ್ ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪ ಮತ್ತು ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಪ್ರಶಂಸಿದ್ದಾರೆ. ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಪುಟ್ಟಮಣಿ ದೇವಿದಾಸ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಹರ್ಷವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News