ಕಲಬುರಗಿ| ಶರಣಬಸವ ವಿಶ್ವವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ
Update: 2025-12-15 23:12 IST
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವ ನಿಮಿತ್ತ ಪೂಜ್ಯ ಡಾ.ಶರಣಬಸಪ್ಪ ಅಪ್ಪ ಅನುಭವ ಮಂಟಪದಲ್ಲಿ ವಿವಿಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಡೆಯಿತು.
ಕಾರ್ಯಕ್ರಮದ ಘಟಿಕೋತ್ಸವದಲ್ಲಿ ಪದವಿ ಪಡೆಯಲು ವಂಚಿತರಾದ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರಗಳನ್ನು ಪ್ರದಾನ ಮಾಡಲಾಯಿತು.
ಈ ಸಮಾರಂಭವು ಘಟಿಕೋತ್ಸವದ ಎಲ್ಲಾ ಸಂಪ್ರದಾಯಗಳನ್ನು ಒಳಗೊಂಡಿದ್ದು, ಕುಲಸಚಿವ (ಮೌಲ್ಯಮಾಪನ) ಡಾ. ಎಸ್. ಎಚ್. ಹೊನ್ನಳ್ಳಿಯವರು ಬೆಳ್ಳಿ ಗದೆಯೊಂದಿಗೆ ವಿಧ್ಯುಕ್ತವಾಗಿ ಮೆರವಣಿಗೆಯನ್ನು ಮುನ್ನಡೆಸಿದರು. ಕುಲಸಚಿವ ಡಾ. ಎಸ್. ಜಿ. ಡೊಳ್ಳೇಗೌಡರ್ ಹಾಗೂ ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮಿ ಪಾಟೀಲ್ ಮಾಕಾ ಸೇರಿದಂತೆ ಶೈಕ್ಷಣಿಕ ಮಂಡಳಿ ಸದಸ್ಯರು ಮತ್ತು ಎಲ್ಲಾ ವಿಭಾಗಗಳ ಮುಖ್ಯಸ್ಥರು ವಿಧ್ಯುಕ್ತ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಕಾರ್ಯಕ್ರಮದಲ್ಲಿ 1800ಕ್ಕೂ ಹೆಚ್ಚು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಗಣ್ಯರಿಂದ ತಮ್ಮ ಪ್ರಮಾಣಪತ್ರಗಳನ್ನು ಪಡೆದರು.