ಕಲಬುರಗಿ| ಹೃದಯಾಘಾತದಿಂದ ಕರ್ತವ್ಯನಿರತ ಮುಖ್ಯ ಪೇದೆ ಮೃತ್ಯು
Update: 2025-09-05 18:56 IST
ಕಲಬುರಗಿ : ಕರ್ತವ್ಯನಿರತ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೇಡಂ ತಾಲ್ಲೂಕಿನಲ್ಲಿ ನಡೆದಿದೆ.
ಮೃತರನ್ನು ಕಾಳಗಿ ತಾಲ್ಲೂಕಿನ ಲಕ್ಷ್ಮಣ ನಾಯಕ ತಾಂಡಾದ ನಿವಾಸಿ, ಸೇಡಂ ತಾಲ್ಲೂಕಿನ ಮಳಖೇಡ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕರ್ತವ್ಯ ನಿರ್ವಸುತ್ತಿದ್ದ ಮನೋಹರ ಪವಾರ್(46) ಎಂದು ಗುರುತಿಸಲಾಗಿದೆ.
ಗುರುವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿ, ನೋಟಿಸ್ ಕೊಡುವುದಕ್ಕಾಗಿ ಸೇಡಂ ತಹಶೀಲ್ದಾರ್ ಕಚೇರಿಯತ್ತ ಹೋಗುತ್ತಿದ್ದಾಗ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಅಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಆ್ಯಂಬುಲೆನ್ಸ್ ನಲ್ಲಿ ಕಲಬುರಗಿ ಆಸ್ಪತ್ರೆಗೆ ಕರೆತರುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
23 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮನೋಹರ ಪವಾರ್ ಅವರ ಅಂತ್ಯಕ್ರಿಯೆ ಲಕ್ಷ್ಮಣ ನಾಯಕ ತಾಂಡಾದಲ್ಲಿ ಶುಕ್ರವಾರ ನೆರವೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ.