ಕಲಬುರಗಿ | ಅಪರಿಚಿತ ವಾಹನ ಢಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Update: 2025-11-20 16:52 IST
ಕಲಬುರಗಿ: ಅಪರಿಚಿತ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ರಸ್ತೆಯ ಶರಣ ಸಿರಸಗಿ ಗ್ರಾಮದ ನಾಗಲಿಂಗೇಶ್ವರ ದೇವಸ್ಥಾನದ ಸಮೀಪ ಸಂಭವಿಸಿದೆ.
ಕಲಬುರಗಿ ತಾಲೂಕಿನ ನದಿಸಿನ್ನೂರ್ ಗ್ರಾಮದ ನಿವಾಸಿ ಸತೀಶ್ ಕುಮಾರ್ ನಾಯ್ಕೋಡಿ(33) ಮೃತ ದುರ್ದೈವಿ.
ಸತೀಶ್ ಕುಮಾರ್ ಕಲಬುರಗಿಯಿಂದ ಗಾಣಗಾಪುರ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಸತೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಕುರಿತು ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದೆ.