×
Ad

ಕಲಬುರಗಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾಸ್ಟೆಲ್ ನೌಕರರ ಪ್ರತಿಭಟನೆ

Update: 2025-12-30 19:02 IST

ಕಲಬುರಗಿ: ಬಿಸಿಎಂ ಇಲಾಖೆಯ ಉಪನಿರ್ದೇಶಕ ಸೋಮಶೇಖರ್ ಅವರ ಮೇಲೆ ಆರೋಪ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ಹೊಸ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು, ಬೀದರ್ ನಂತೆ ಕಲಬುರಗಿಯಲ್ಲೂ ಸಹಕಾರಿ ಸಂಘ ಸ್ಥಾಪಿಸಬೇಕು, ಕನಿಷ್ಠ ವೇತನ ಜಾರಿಗೆ ಮಾಡಬೇಕು, ವಾರಕ್ಕೊಂದು ರಜೆ, ವಿದ್ಯಾರ್ಥಿಗಳ ಆಹಾರ ವೆಚ್ಚ ಹೆಚ್ಚಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಪರಶುರಾಮ್ ಹಡಲಗಿ, ಕಾಶಿನಾಥ ಬಂಡಿ, ಕಲ್ಯಾಣಿ ಪೂಜಾರಿ, ನಾಗರತ್ನ ಮದನಕರ್, ನರಸಮ್ಮ ಕೊಡಂಪಳ್ಳಿ, ನಾಗರಾಜ ಕಟ್ಟಿಮನಿ, ಬಾಬು ಹೊಸಮನಿ, ಮಲ್ಲಮ್ಮ ಕೊಡ್ಲಿ, ನರಸಮ್ಮ ಚಂದನಕೇರಾ, ಸೇರಿದಂತೆ ಹಲವರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News