×
Ad

ಕಲಬುರಗಿ | ಕಳಪೆ ಆಹಾರ ಪೊರೈಕೆ ಆರೋಪ: ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

Update: 2025-04-19 10:51 IST

ಕಲಬುರಗಿ: ಗುಲಬರ್ಗಾ ವಿವಿಯ ಆವರಣದ ಸಮಾಜ ಕಲ್ಯಾಣ ಇಲಾಖೆಯ ಸ್ನಾತಕೋತ್ತರ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಕೊಳೆತ ತರಕಾರಿ ಬಳಸಿ ಕಳಪೆ ಆಹಾರ ತಯಾರಿಸಲಾಗುತ್ತಿದೆ. ರುಚಿ, ಶುಚಿ ಎರಡೂ ಮರೀಚಿಕೆಯಾಗಿದೆ' ಎಂದು ಆರೋಪಿಸಿ ವಸತಿ ನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

 ವಿದ್ಯಾರ್ಥಿ ಮುಖಂಡರಾದ ಆನಂದ ಮೇತ್ರೆ, ವೀರೇಶ ಜಾಧವ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಅಡುಗೆಗೆ ಬಳಸಲಾಗುತ್ತಿದ್ದ ಟೊಮೆಟೊಗಳನ್ನು ಪ್ರದರ್ಶಿಸಿ ಆಕ್ರೋಶ ಹೊರಹಾಕಿದರು.

'ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಈ ತನಕ ಊಟದ ಪ್ಲೇಟ್ ವಿತರಿಸಿಲ್ಲ. ಮೂರು ತಿಂಗಳಿನಿಂದ ಶುಚಿತ್ವ ಕಿಟ್ ಗಳನ್ನು ವಿತರಿಸಿಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ್ ರಂಜೋಳಕರ್ ಭೇಟಿ ನೀಡಿ ವಿದ್ಯಾರ್ಥಿಗಳ ಅಹವಾಲು ಆಲಿಸಿದರು. ವಿದ್ಯಾರ್ಥಿಗಳ ಬೇಡಿಕೆಗಳನ್ನು ಪೂರೈಸುವುದಾಗಿ ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟರು.

ಈ ಸಂದರ್ಭದಲ್ಲಿ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಆನಂದ ಮೇತ್ರೆ, ವಸತಿ ನಿಲಯದ ಅಧ್ಯಕ್ಷ ರಾಕೇಶ್, ಉಪಾಧ್ಯಕ್ಷರಾದ ವಿರೇಶ, ಸುನೀಲ್, ಸುಮಿತ್ ಸೇರಿದಂತೆ ಇತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

'ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ ತಂಪಾದ ಶುದ್ಧ ಕುಡಿಯುವ ನೀರು ಪೂರೈಸುವ ಯಂತ್ರವನ್ನು ಅಧಿಕಾರಿಗಳು ಹಾಸ್ಟೆಲ್ಗೆ ತಂದಿದ್ದಾರೆ. ವಿದ್ಯಾರ್ಥಿಗಳಿಗೆ ಊಟದ ತಟ್ಟೆಗಳನ್ನ ವಿತರಿಸಿದ್ದಾರೆ. ಆಹಾರದ ಗುಣಮಟ್ಟವನ್ನು ಹೆಚ್ಚಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ' ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಆನಂದ ಮೇತ್ರೆ ಮತ್ತಿತರ ಹಾಸ್ಟೆಲ್ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News