×
Ad

ಕಲಬುರಗಿ | ಜೂ.29ರಂದು 'ಹೃದಯವಂತ' ಅಭಿನಂದನಾ ಗ್ರಂಥ ಬಿಡುಗಡೆ: ಬಿ.ಎಚ್ ನಿರಗುಡಿ

Update: 2025-06-25 16:10 IST

ಕಲಬುರಗಿ: ಜೂ.29 ರಂದು ನಗರದ ಕೂಸನೂರ್ ರಸ್ತೆಯ ಜಯನಗರದಲ್ಲಿರುವ ಅನುಭವ ಮಂಟಪದಲ್ಲಿ ಬೆಳಗ್ಗೆ 10.45ಗಂಟೆಗೆ ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ ಡಾ.ಎಸ್.ಎಸ್.ಗುಬ್ಬಿ ಅವರ ಜೀವನ, ಸಾಧನೆಗಳ ಕುರಿತಾಗಿ ರಚಿಸಿರುವ 'ಹೃದಯವಂತ' ಎಂಬ ಅಭಿನಂದನಾ ಗ್ರಂಥದ ಬಿಡುಗಡೆಯ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಲೇಖಕ, ಅಭಿನಂದನಾ ಗ್ರಂಥದ ಸಂಪಾದಕ ಬಿ.ಎಚ್.ನಿರಗುಡಿ ತಿಳಿಸಿದ್ದಾರೆ.

ಅಂದು ನಡೆಯಲಿರುವ ಸಮಾರಂಭದಲ್ಲಿ ಜೇವರ್ಗಿಯ ಸೊನ್ನ ವಿರಕ್ತ ಮಠದ ಡಾ.ಶಿವಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದು, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆಯಲ್ಲೇ 336 ಪುಟದ ಅಭಿನಂದನಾ ಗ್ರಂಥವನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ್ ಅವರು ಬಿಡುಗಡೆ ಮಾಡಲಿದ್ದಾರೆ. ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಡಾ.ಎಸ್.ಬಿ.ಕಾಮರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಪಪ್ಪಾ, ಡಾ.ಕೆ.ಜಿ. ಬಿರಾದಾರ, ಎಸ್.ಎಲ್ ಪಾಟೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ನಿರಗುಡಿ ತಿಳಿಸಿದರು.

ಕಾರ್ಯಕ್ರಮಕ್ಕೂ ಮುಂಚೆ ಕಿರಣ್ ಪಾಟೀಲ್, ಚಾಮರಾಜ ದೊಡ್ಡಮನಿ, ಬಾಬು ಜಾಧವ್ ಮತ್ತು ಡಾ. ರಾಜಶೇಖರ್ ಮಾಂಗ್ ಅವರು ಕನ್ನಡ ಗೀತ ಗಾಯನ ನೆರವೇರಿಸಿ ಕೊಡಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಡಾ.ಎಸ್.ಬಿ.ಕಾಮರೆಡ್ಡಿ, ಎಸ್.ಎಸ್.ಹಿರೇಮಠ್, ಸಂಗಮೇಶ್ ಹಿರೇಮಠ್, ಗುರುಬಸಪ್ಪ ಪಾಟೀಲ್ ಮತ್ತಿತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News