×
Ad

Kalaburagi | ಐಎಎಸ್, ಕೆಎಎಸ್ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

Update: 2026-06-23 15:57 IST

ಸಾಂದರ್ಭಿಕ ಚಿತ್ರ | Photo credit : PTI

ಕಲಬುರಗಿ: ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ಕಲಬುರಗಿಯ 2025-26ನೇ ಸಾಲಿಗೆ ಐಎಎಸ್ ಹಾಗೂ ಕೆ.ಎಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಯ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ.

2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ಕಲಬುರಗಿ ಇಲ್ಲಿ ಕಲ್ಯಾಣ ಕರ್ನಾಟಕ ಭಾಗದ ಭಾಗದಲ್ಲಿನ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು NIC (https://kalaburagi.nic.in) ವೆಬ್‌ಸೈಟ್ ನಲ್ಲಿ ಆಹ್ವಾನಿಸಲಾಗಿರುತ್ತದೆ.

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ: 28-06-2026 ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿತ್ತು, ಆದರೆ ತಾಂತ್ರಿಕ ಕಾರಣಗಳಿಂದ ಸದರಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News