ಕಲಬುರಗಿ: ಅನ್ನಭಾಗ್ಯ ಯೋಜನೆಯಡಿ ವಿತರಿಸಬೇಕಾದ ಅಕ್ಕಿ ಮತ್ತು ಜೋಳವನ್ನು ಅಕ್ರಮವಾಗಿ ಶೆಡ್‌ನಲ್ಲಿ ಸಂಗ್ರಹಿಸಿಟ್ಟಿದ್ದ ಸ್ಥಳದ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಸುಮಾರು 6.36 ಲಕ್ಷ ರೂ. ಮೌಲ್ಯದ 18 ಟನ್ ಆಹಾರ ಧಾನ್ಯವನ್ನು ಜಪ್ತಿ ಮಾಡಿದ್ದಾರೆ.

ಜಿಲ್ಲೆಯ ಆಳಂದ ತಾಲೂಕಿನ ಮಟಕಿ ಗ್ರಾಮದ ಶೆಡ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 4.26 ಲಕ್ಷ ರೂ. ಮೌಲ್ಯದ 12 ಟನ್ ಅನ್ನಭಾಗ್ಯ ಅಕ್ಕಿ ಹಾಗೂ 2.10 ಲಕ್ಷ ರೂ. ಮೌಲ್ಯದ 6 ಟನ್ ಜೋಳವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ಆಹಾರ ಧಾನ್ಯಗಳನ್ನು ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಡಲಾಗಿತ್ತು ಎಂದು ಶಂಕಿಸಲಾಗಿದೆ. ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor