ಕಲಬುರಗಿ| 8.51 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ಅಕ್ರಮ ಸಾಗಾಟ : ಓರ್ವನ ಬಂಧನ
Update: 2025-12-06 22:17 IST
ಕಲಬುರಗಿ: ಯಾದಗಿರಿಯಿಂದ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಕ್ಕೆ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ 8,51,020ರೂ. ಮೌಲ್ಯದ 25 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಳ್ಳುವಲ್ಲಿ ವಿಶ್ವವಿದ್ಯಾಲಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ದುಬಲಗುಂಡಿ ಗ್ರಾಮದ ಲಾರಿ ಚಾಲಕ ರಾಜು ನರಸಿಂಗರಾವ್(28) ಬಂಧಿತ ಆರೋಪಿಯಾಗಿದ್ದಾನೆ.
ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯ ಗೀತಾ ನಗರ ಸೇಡಂ ರೋಡ ಹತ್ತಿರ ಆರೋಪಿ ರಾಜು ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಅಕ್ರಮ ಅಕ್ಕಿ ಸಾಗಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.