×
Ad

ಕಲಬುರಗಿ | ನೀರನ್ನು ಕಾಯಿಸಿ, ಆರಿಸಿ, ಸೋಸಿ ಕುಡಿಯಲು ಸೂಚನೆ

Update: 2025-03-21 22:49 IST

ಸಾಂದರ್ಭಿಕ ಚಿತ್ರ

ಕಲಬುರಗಿ : ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲಗಳಲ್ಲಿ ಒಂದಾದ ಭೀಮಾ ನದಿಯ ಮೇಲ್ಭಾಗದಲ್ಲಿ ನೀರಿನ ಹರಿಯುವಿಕೆ ಪೂರ್ತಿಯಾಗಿ ನಿಂತಿದ್ದು, ಈ ಬ್ಯಾರೇಜಿನಲ್ಲಿ ಶೇಖರಣೆಗೊಂಡ ನೀರು ಕೆಳಮಟ್ಟದಾಗಿದ್ದು, ಈ ನಿಂತಿರುವ ನೀರಿನ ಬಣ್ಣ ಹಾಗೂ ಗುಣಮಟ್ಟವು ತೀವ್ರವಾಗಿ ಇಳಿಕೆಯಾಗಿದೆ. ಇದನ್ನು ಸುಧಾರಿಸಲು ಈಗಾಗಲೇ ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಆದಾಗ್ಯೂ ಆರೋಗ್ಯದ ಹಿತದೃಷ್ಠಿಯಿಂದ ನಗರದ ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೋಸಿ ಕುಡಿಯಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಅದೇ ರೀತಿ ಬೆಣ್ಣೆತೋರಾ ಮೂಲ ಸ್ಥಾವರದಲ್ಲಿ ಕುರಿಕೋಟಾ ಪಂಪ್‍ಹೌಸ್‍ನಲ್ಲಿ ಹಾಗೂ ಬಂಬೂ ಬಜಾರ ರಸ್ತೆಗೆ ಇರುವ ಹಳೇ ಜಲಶುದ್ಧೀಕರಣ ಕೇಂದ್ರದಲ್ಲಿ 3 ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗುತ್ತಿರುವ ಕಾರಣ ನಗರದ ನಿರಂತರ ನೀರು ಸರಬರಾಜು ಮಾಡುವ ಬಡಾವಣೆಗಳಿಗೆ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಕಲಬುರಗಿ ನಗರದ ಸಾರ್ವಜನಿಕರು ಕೆಯುಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ ಹಾಗೂ ಮೆ. ಎಲ್ ಆ್ಯಂಡ್ ಟಿ ಲಿಮಿಟೆಡ್ ಇವರೊಂದಿಗೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News