×
Ad

ಕಲಬುರಗಿ | ಅಂತರ್ ಕಾಲೇಜು ಮಹಿಳಾ ಅಥ್ಲೇಟಿಕ್ ಮೀಟ್‌ಗೆ ಚಾಲನೆ

Update: 2025-11-05 20:09 IST

ಕಲಬುರಗಿ: ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಕು.ಶರಣೇಶ್ವರಿ ರೇಷ್ಮಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ, ವಿಜಯಪುರ ಇವರ ಸಹಯೋಗದಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ 19ನೇ ಅಂತರ್ ಮಹಿಳಾ ಮಹಾವಿದ್ಯಾಲಯಗಳ ಅಥ್ಲೇಟಿಕ್ ಮೀಟ್ಅನ್ನು ಅಂತರರಾಷ್ಟ್ರೀಯ ಕ್ರೀಡಾಪಟು ಶೃದಿಯಾ ರಾಮನಗೌಡ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗುವಿವಿ ಕುಲಪತಿ ಪ್ರೊ.ಶಶಿಕಾಂತ ಎಸ್.ಉಡಿಕೇರಿ, ಕುಲಸಚಿವರಾದ ಪ್ರೊ.ರಮೇಶ ಲಂಡನ್ಕರ್, ರೇಷ್ಮಿ ಎಜುಕೇಷನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಭಾರತಿ ಎನ್.ರೇಷ್ಮಿ, ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎನ್.ಜಿ.ಕಣ್ಣೂರ, ಸದಸ್ಯರಾದ ಶ್ರೀಪಾದ ಚೌಡಾಪೂರಕರ್, ಅತೀಕ್ ರೆಹಮಾನ್, ರಾಘವೇಂದ್ರ ಎಂ.ಭೈರಪ್ಪ, ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಶಿವಯೋಗಿ ಎಲಿ, ಪ್ರೊ.ಹನುಮಂತಯ್ಯ ಪೂಜಾರಿ, ಕಾಲೇಜಿನ ರೇಷ್ಮಿ ಎಜುಕೇಷನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಶರದ್ಎನ್.ರೇಷ್ಮಿ, ಅಥಿತಿ ಸಹಾಯಕ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ವಿಶ್ವನಾಥ ನಡಗಟ್ಟಿ, ರೇಷ್ಮಿ ಎಜುಕೇಷನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಚೀಫ್ ಟ್ರಸ್ಟಿ ಶಿಶಿರ ಎನ್.ರೇಷ್ಮಿ, ಕಾಲೇಜಿನ ಪ್ರಾಂಶುಪಾಲೆ ಡಾ.ಗೀತಾ ಆರ್., ಸಂಯೋಜಕ ಸಂಗಣ್ಣ ಕೆ. ಸೇರಿದಂತೆ ಇತರರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News